ಹುಬ್ಬಳ್ಳಿ: ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ನಗರದ ಹಳೇ ಬಸ್ ನಿಲ್ದಾಣದಿಂದ ಖಾಸಗಿ ಬಸ್‌ಗಳ ಸಂಚಾರ ಆರಂಭವಾಗಿದೆ.

ಜಿಲ್ಲಾಡಳಿತ,ಪೊಲೀಸ್ ಹಾಗೂ ಸಾರಿಗೆ ಅಧಿಕಾರಿಗಳ ನೇತೃತ್ವದಲ್ಲಿ ಬೆಳಗಾವಿ, ವಿಜಯಪುರ, ಗದಗ ಹಾಗೂ ವಿವಿಧ ಭಾಗಗಳಿಗೆ ಖಾಸಗಿ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆಯೂ ಖಾಸಗಿ ಬಸ್ ಸಂಚಾರ ನಡೆಸಿವೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಬಸ್ ನಿಲ್ದಾಣದ ಒಳಗಡೆಯಿಂದಲೇ ಖಾಸಗಿ ಬಸ್‌ಗಳು ಸಂಚಾರ ನಡೆಸುತ್ತಿವೆ. ಬೆಂಗಳೂರು, ಮೈಸೂರು, ಕಲಬುರ್ಗಿ ಭಾಗಗಳಿಂದ ಬೆಳಿಗ್ಗೆಯೇ ಬಂದ ಪ್ರಯಾಣಿಕರು, ವಿವಿಧೆಡೆ ತೆರಳಲು ಸ್ವಲ್ಪ ಪರದಾಡಿದರು. ಮುಷ್ಕರದ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆಯೂಕಡಿಮೆಯಿದೆ.

ಹೊರ ಜಿಲ್ಲೆಗಳಿಗೆ ವಿ.ಆರ್.ಎಲ್, ಗಣೇಶ, ಗುರುಪ್ರಸಾದ ಬಸ್'ಗಳು, ಅವಳಿನಗರದ ನಡುವೆ ಬೇಂದ್ರೆ ಬಸ್‌ಗಳು ಹಾಗೂ ಗ್ರಾಮೀಣ ಭಾಗಗಳಿಗೆ ಮ್ಯಾಕ್ಸಿಕ್ಯಾಬ್ ಸಂಚಾರ ಆರಂಭಿಸಿವೆ.

ಬಸ್ ನಿಲ್ದಾಣಕ್ಕೆ ಭೇಟಿ ಪರಿಶೀಲನೆ ನಡೆಸಿ ಮಾತನಾಡಿದ ಪೊಲೀಸ್ ಕಮಿಷನರ್ ಲಾಬೂ ರಾಮ್, ಸೂಕ್ತ ಭದ್ರತೆಯೊಂದಿಗೆ ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಬಸ್ ಸಂಚಾರಕ್ಕೆ ತೊಂದರೆ ಕೊಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

'ಎಸ್ಮಾ ಜಾರಿ ಸಾಧ್ಯತೆ':

ಖಾಸಗಿ ಬಸ್ ಸಂಚಾರದ ಸುದ್ದಿ ತಿಳಿಯುತ್ತಿದ್ದಂತೆ ನೌಕರರು ಸ್ವಯಂ ಪ್ರೇರಿತವಾಗಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಮುಷ್ಕರದಲ್ಲಿ ಪಾಲ್ಗೊಂಡ ಸಿಬ್ಬಂದಿ ವಿರುದ್ಧ ಸರ್ಕಾರದ ಸೂಚನೆ ಮೇರೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಎಸ್ಮಾ ಜಾರಿ ಮಾಡುವ ಸಾಧ್ಯತೆಯೂ ಇದೆ ಎಂದು ಗ್ರಾಮೀಣ ವಿಭಾಗದ ಸಾರಿಗೆ ನಿಯಂತ್ರಣಾಧಿಕಾರಿ ಎಚ್. ರಾಮನಗೌಡ ತಿಳಿಸಿದರು.

ರಸ್ತೆಗಿಳಿಯದ ಸಾರಿಗೆ ಸಂಸ್ಥೆ ಬಸ್: ಖಾಸಗಿ ಬಸ್ ಸಂಚಾರ ಆರಂಭ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.