ಹುಬ್ಬಳ್ಳಿ: ಹುಬ್ಬಳ್ಳಿಯ ವಾರ್ಡ್ ಸಂಖ್ಯೆ 41ರ ವಿಶ್ವೇಶ್ವರ ನಗರ ಹಾಗೂ ಆದರ್ಶ ನಗರದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಪ್ರಚಾರ ಸಭೆ ನಡೆಯಿತು.

ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆ ಸದಸ್ಯರಾದ ಸಂತೋಷ್ ಚವ್ಹಾಣ, ವೀರಣ್ಣ ಸವಡಿ ಜೋಶಿ ಪರ ಮತಯಾಚಿಸಿದರು.

ಮಹೇಶ ಟೆಂಗಿನಕಾಯಿ ಮಾತನಾಡಿ, ಪ್ರಲ್ಹಾದ ಜೋಶಿ ಅವರು ಕೇಂದ್ರದಿಂದ ಹೆಚ್ಚು ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಸಾಧನೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸಬೇಕು. ಮತದಾನ ದಿನದಂದು ಎಲ್ಲರೂ ತಪ್ಪದೆ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.