ನವಲಗುಂದ: ಇಲ್ಲಿನ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ಹಾಗೂ ಪಕ್ಷಾತೀತ ರೈತ ಹೋರಾಟ ಕೇಂದ್ರ ಸಮಿತಿ ಅಧ್ಯಕ್ಷ ಸಿದ್ದಪ್ಪ ಮುಪ್ಪಯ್ಯನವರ (85) ಮಂಗಳವಾರ ನಿಧನರಾದರು.

ದಶಕಗಳಿಂದ ಅವರು ಮಹದಾಯಿ ರೈತ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಾವೇರಿ, ಮಹದಾಯಿ, ಬೆಳೆಗಾರರ ಸಮಸ್ಯೆ, ಬೆಲೆ ಕುಸಿತದಂತಹ ಕೃಷಿಕರ ಸಮಸ್ಯೆಗಳ ಬಗ್ಗೆ ಸುದೀರ್ಘ ಹೋರಾಟದಲ್ಲಿ ಭಾಗಿಯಾಗಿದ್ದರು.

ದೆಹಲಿವರೆಗೂ ರೈತರನ್ನು ಕರೆದೊಯ್ದು ಕೇಂದ್ರ ಸರ್ಕಾರದ ಸಚಿವರನ್ನು ಭೇಟಿಯಾಗಿ ಮಹದಾಯಿ ಕಾಮಗಾರಿ ಶೀಘ್ರವೇ ಪ್ರಾರಂಭಿಸುವಂತೆ ಮನವಿ ಮಾಡಿದ್ದರು.

ಪ್ರಮುಖವಾಗಿ ಈ ಭಾಗದ ಬೆಳೆಗಳ ಬೆಂಬಲ ಬೆಲೆಗಾಗಿ, ರೈತರ ಪಂಪ್‍ಸೆಟ್‍ಗಳಿಗೆ ಮೀಟರ್ ಅಳವಡಿಕೆ ವಿರುದ್ಧ ಹೋರಾಟ ನಡೆಸಿದ್ದರು. ಹೋರಾಟದ ಮೂಲಕವೇ ಸಾರ್ವಜನಿಕ ಜೀವನದುದ್ದಕ್ಕೂ ರೈತ ಪರ ದನಿಯಾಗಿಯೇ ಗುರುತಿಸಿಕೊಂಡಿದ್ದರು.

ಅವರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.