ಹುಬ್ಬಳ್ಳಿ: 'ಅಶಕ್ತರ ಸಬಲೀಕರಣ, ಮಹಿಳೆಯರ ಪ್ರಗತಿ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಣಾಳಿಕೆಯಲ್ಲಿ ವಿವರಿಸಿದ್ದು, ವಿಕಸಿತ ಭಾರತ ಸಂಕಲ್ಪದ ಮಾರ್ಗದರ್ಶಿ ಪ್ರಣಾಳಿಕೆಯಾಗಿದೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇರುವ ಅಂಬೇಡ್ಕರ್ ಮೂರ್ತಿಗೆ ಭಾನುವಾರ ಮಾಲಾರ್ಪಣೆ ಮಾಡಿ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.

ಮಹಿಳೆಯರ, ರೈತರ ಸಶಕ್ತೀಕರಣ, ಬಡತನ ನಿರ್ಮೂಲನೆ ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಣಾಳಿಕೆಯಲ್ಲಿ ವಿವರಿಸಲಾಗಿದೆ. ಸಣ್ಣ ಕೈಗಾರಿಕೆಗೂ ವಿಶೇಷ ಒತ್ತು ನೀಡಲಾಗಿದೆ. ದೇಶದಲ್ಲಿ ಬಹು ಆಯಾಮಿ ಬಡತನವಿದ್ದು, ಅದರ ನಿರ್ಮೂಲನೆಗೂ ಪ್ರಣಾಳಿಕೆಯಲ್ಲಿ ವಿಶೇಷ ಆದ್ಯತೆ ನೀಡಲಾಗಿದೆ. ದೇಶದ ಅರ್ಥ ವ್ಯವಸ್ಥೆ ಹಾಗೂ ಆಡಳಿತದಲ್ಲಿ ಪರಿವರ್ತನೆ ತರುವ ನಿಟ್ಟಿನಲ್ಲಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ' ಎಂದು ಹೇಳಿದರು.

ಡಾ. ಬಿ.ಆರ್. ಅಂಬೇಡ್ಕರ್ ಶತಮಾನ ಕಂಡ ಮಹಾನ್ ಪುರುಷ. ಸೂರ್ಯ-ಚಂದ್ರ ಇರುವವರೆಗೂ ಅವರನ್ನು ದೇಶ ಸ್ಮರಿಸುತ್ತದೆ. ಸಾಕಷ್ಟು ಕರಾಳ ನೋವು ಅನುಭವಿಸಿದ್ದರೂ, ಅವರು ಸಂವಿಧಾನ ರಚನೆ ಸಂದರ್ಭ ದ್ವೇಷ ರಹಿತವಾಗಿ ಕೆಲಸ ಮಾಡಿದ್ದಾರೆ. ಎಲ್ಲ ಸಮಾಜದವರಿಗೂ ಸಮಾನತೆಯ ಹಕ್ಕನ್ನು ನೀಡಿರುವ ಮಹಾನ್ ಪುಣ್ಯಾತ್ಮ. ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ಭಾವ ಇರದ ಸುಂದರ ಸಮಾಜ ಹಾಗೂ ವಿಕಸಿತ ಭಾರತ ನಿರ್ಮಿಸುವ ಮೂಲಕ ನಾವು ಅವರಿಗೆ ಗೌರವ ಸಲ್ಲಿಸಬೇಕಿದೆ' ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.