ಹುಬ್ಬಳ್ಳಿ: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಅವರು ಜೆಎಸ್ಡಬ್ಲು ಕಂಪನಿಯ ಪ್ರತಿನಿಧಿಗಳೊಂದಿಗೆ ಇಲ್ಲಿನ ರೈಲ್ ಸೌಧದಲ್ಲಿ ಗುರುವಾರ ವ್ಯಾಪಾರ ಅಭಿವೃದ್ಧಿ ಕುರಿತು ಸಭೆ ನಡೆಸಿದರು.

ಕಬ್ಬಿಣದ ಅದಿರು, ಕಲ್ಲಿದ್ದಲು ಮತ್ತು ಇತರ ವಸ್ತುಗಳ ಸಾಗಣೆ ಹಾಗೂ ಸರಕು ಸಾಗಣೆಯಲ್ಲಿನ ಸಮಸ್ಯೆ, ಲೋಡಿಂಗ್, ಅನ್ಲೋಡಿಂಗ್ ಹೆಚ್ಚಳ, ಮುಂದಿನ ದಿನಗಳಲ್ಲಿ ವ್ಯಾಪಾರ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

‘ಸರಕು ಸಾಗಣೆಯು ನೈರುತ್ಯ ರೈಲ್ವೆಯ ಪ್ರಮುಖ ಆದಾಯವಾಗಿದ್ದು, ಜೆಎಸ್ಡಬ್ಲು ಕಂಪನಿಯು ಇದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೆಎಸ್ಡಬ್ಲು ಕಂಪನಿಯು ಮುಂದಿನ ನಾಲ್ಕು ತಿಂಗಳಲ್ಲಿ ಸರಕು ಸಾಗಣೆ ಹೆಚ್ಚಿಸಬೇಕು. ಇದಕ್ಕೆ ನೈರುತ್ಯ ಇಲಾಖೆ ಸಂಪೂರ್ಣ ಬೆಂಬಲ ನೀಡಲಿದೆ’ ಎಂದು ಜೆಎಸ್ಡಬ್ಲು ಪ್ರತಿನಿಧಿಗಳಿಗೆ ಅರವಿಂದ ಶ್ರೀವಾಸ್ತವ ಭರವಸೆ ನೀಡಿದರು.

ನಾಲ್ಕು ರೈಲ್ವೆ ಕೆಳಸೇತುವೆಗಳ ನಿರ್ಮಾಣ ಕುರಿತು ರೈಲ್ವೆ ಇಲಾಖೆ ಅಧಿಕಾರಿಗಳ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದ ಜೆಎಸ್ಡಬ್ಲು ಪ್ರತಿನಿಧಿಗಳು, ಶೀಘ್ರವೇ ಈ ಯೋಜನೆ ಕಾರ್ಯಗತಗೊಳಿಸುವುದಾಗಿ ತಿಳಿಸಿದರು. ದರೋಜಿ ರೈಲು ನಿಲ್ದಾಣ ಕಾಮಗಾರಿ, ಸಿಗ್ನಲಿಂಗ್ ಘಟಕಗಳ ನವೀಕರಣ ಸೇರಿದಂತೆ ಮುಂದಿನ ಯೋಜನೆಗಳ ಕುರಿತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಕೆ.ಎಸ್. ಜೈನ್, ಪ್ರಧಾನ ಮುಖ್ಯ ಇಂಜಿನಿಯರ್ ಸಿ.ಎಂ. ಗುಪ್ತಾ, ಪ್ರಧಾನ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಸತ್ಯಪ್ರಕಾಶ ಶಾಸ್ತ್ರಿ, ಪ್ರಧಾನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ಬಿ.ಪ್ರಶಾಂತಕುಮಾರ್, ಪ್ರಧಾನ ಮುಖ್ಯ ಎಲೆಕ್ಟ್ರಿಕಲ್ ಇಂಜಿನಿಯರ್ ಇಶಾಕ್ ಖಾನ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹರ್ಷ ಖರೆ, ರೈಲ್ವೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.