ಹುಬ್ಬಳ್ಳಿ: ‘ಶಾಸಕ ಅರವಿಂದ ಬೆಲ್ಲದ ಅವರು ಬಹಳ ವರ್ಷ ಕಾಲ ರಾಜಕೀಯದಲ್ಲಿರಬೇಕು. ನಾಯಕತ್ವ ವಿಷಯವನ್ನು ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬಿಡಬೇಕು’ ಎಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಸಲಹೆ ಮಾಡಿದ್ದಾರೆ.

ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಲ್ಲದ ಅವರ ತಂದೆಯೊಂದಿಗೂ ಶಾಸಕನಾಗಿ ಕೆಲಸ ಮಾಡಿದ್ದೇನೆ. ನಿಮ್ಮ ತಂದೆಯವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಿರಿ. ರಾಜಕೀಯದಲ್ಲಿ ದೂರದೃಷ್ಟಿ ಇಟ್ಟುಕೊಂಡು ಕೆಲಸ ಮಾಡಬೇಕಾಗುತ್ತದೆ. ಅವರು ಮುಖ್ಯಮಂತ್ರಿಯಾದರೆ ಸಂತೋಷ. ಇವತ್ತಿನ ಸಂದರ್ಭದಲ್ಲಿ ಅದು ಸುಲಭದ ಮಾತಲ್ಲ. ತಾಳ್ಮೆಯಿಂದ ವರ್ತಿಸಿದರೆ ಒಳ್ಳೆಯದು’ ಎಂದರು.

‘ಜಿಲ್ಲೆಯ ಶಾಸಕರ ಒಗ್ಗಟ್ಟನ್ನು ಒಡೆಯುವ ಕೆಲಸ ಆಗಬಾರದು. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಅದಕ್ಕೆ ಅವರ ಬೆಂಬಲ ಕೋರುತ್ತೇನೆ. ಮುಖ್ಯಮಂತ್ರಿ ಬದಲಾವಣೆ ಬಗೆಗೆ ಅವರು, ನನ್ನೊಂದಿಗೆ ಚರ್ಚೆ ನಡೆಸಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎರಡು ವರ್ಷಕಾಲ ಮುಖ್ಯಮಂತ್ರಿಯಾಗಿರಬೇಕು’ ಎಂದು ಹೇಳಿದರು.

ರಾಮಮಂದಿರಕ್ಕೆ ಕೊಟ್ಟ ಹಣ ವಾಪಸ್ ಕೊಡಿ: ಡಿ.ಕೆ.ಶಿವಕುಮಾರ್ ಒತ್ತಾಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.