ಹುಬ್ಬಳ್ಳಿ: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆಗೆ ಇಂದು(ಗುರುವಾರ) ಸಂಜೆ ಹುಬ್ಬಳ್ಳಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಮಹಿಳಾ ಕಾರ್ಯಕರ್ತರು ಹಾಗೂ ಎಸ್.ಆರ್. ಬೊಮ್ಮಾಯಿ ಶಾಲೆ ಶಾಲೆ ವಿದ್ಯಾರ್ಥಿಗಳು ವಿಮಾನ ನಿಲ್ದಾಣದ ಎದುರು ರಂಗೋಲಿ ಬಿಡಿಸುವಲ್ಲಿ ನಿರತರಾಗಿದ್ದಾರೆ.

'ನಿಲ್ದಾಣದ ಪ್ರವೇಶ ದ್ವಾರದಿಂದ ಅಕ್ಷಯ ಪಾರ್ಕ್' ವರೆಗೂ ರಂಗೋಲಿ ಹಾಕಲು ನಿರ್ಧರಿಸಿದ್ದು, ಮಧ್ಯಾಹ್ನ 2ರವರೆಗೂ ಈ ಕಾರ್ಯ ನಡೆಯಲಿದೆ. 50ಕ್ಕೂ ಹೆಚ್ಚು ಮಂದಿ ಇದ್ದೇವೆ' ಎಂದು ಕಾರ್ಯಕರ್ತೆ ಕಮಲವ್ವ ಮ್ಯಾಗೇರಿ ಹೇಳಿದರು.

ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಪ್ರಧಾನಿ ಸಂಚರಿಸುವ ಮಾರ್ಗದುದ್ದಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಕಟ್ಟೆಚ್ಚರವಹಿಸಲಾಗಿದೆ. ಅನುಮಾನಾಸ್ಪದವಾಗಿ ಸಂಚರಿಸುವ ವಾಹನ ಸವಾರರ ಹಾಗೂ ಸಾರ್ವಜನಿಕರನ್ನು ಪೊಲೀಸರು ತಡೆದು ವಿಚಾರಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.