ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ್ದು, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಮಾಡಿದೆ.

ತಂಡದಲ್ಲಿ ಡಿವೈಎಸ್ಪಿ ದರ್ಜೆ ಅಧಿಕಾರಿ ಸೇರಿ ಎಂಟು ಮಂದಿ ಸಿಬ್ಬಂದಿ ಇರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ಬೆಳಿಗ್ಗೆ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಲಿದೆ. ನಂತರ ವಿದ್ಯಾನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಈವರೆಗೆ ಕೈಗೊಂಡ ತನಿಖೆಯ ಮಾಹಿತಿ ಪಡೆದು, ತನಿಖಾಧಿಕಾರಿಯಿಂದ ಕಡತ ಹಸ್ತಾಂತರಿಸಿಕೊಳ್ಳುವ ಸಾಧ್ಯತೆಯಿದೆ. ನೇಹಾ ಪಾಲಕರ ಹೇಳಿಕೆಯನ್ನು ಸಹ ಪಡೆದು ತನಿಖೆ ಮುಂದುವರಿಸಲಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ಸ್ಥಳೀಯ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ, ಕೃತ್ಯಕ್ಕೆ ಬಳಸಿದ ಚಾಕು, ಕೊಲೆಯಾದ ನೇಹಾಳ ಮತ್ತು ಆರೋಪಿ ಫಯಾಜ್ನ ರಕ್ತದ ಮಾದರಿ, ಬಟ್ಟೆಗಳನ್ನು ಸಂಗ್ರಹಿಸಿ, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅಲ್ಲದೆ, ಕೃತ್ಯ ನಡೆದ ಸ್ಥಳದಲ್ಲಿದ್ದ, ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಸಂಗ್ರಹಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.