ಹುಬ್ಬಳ್ಳಿ: 'ನೇಹಾ ಪ್ರಕರಣದ ತನಿಖೆಯ ಬೆಳವಣಿಗೆ ಹಾಗೂ ಮುಖ್ಯಮಂತ್ರಿ, ಗೃಹ ಸಚಿವರ ಹೇಳಿಕೆ ಗಮನಿಸಿದರೆ ಸಿಐಡಿ ತನಿಖೆಯಿಂದ ನ್ಯಾಯ ಸಿಗುವ ಭರವಸೆಯಿಲ್ಲ. ರಾಜ್ಯ ಸರ್ಕಾರ ತಕ್ಷಣ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.

ಬಿಡ್ನಾಳದಲ್ಲಿರುವ ನೇಹಾ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ನೀಡಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

'ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ಹೇಳಿಕೆಗಳನ್ನು ಗಮನಿಸಿದರೆ, ಪರೋಕ್ಷವಾಗಿ ಅಲ್ಪಸಂಖ್ಯಾತರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ. ನೇಹಾ ಕೊಲೆ ಪ್ರಕರಣದಲ್ಲಿ ಇನ್ನೂ ನಾಲ್ಕು ಮಂದಿ ಇದ್ದಾರೆ ಎಂದು ನೇಹಾ ಅವರ ತಂದೆ ನಿರಂಜನಯ್ಯ ಅವರೇ ಹೇಳುತ್ತಿದ್ದಾರೆ. ಈವರೆಗೂ ಪೊಲೀಸರು ಅವರನ್ನು ಬಂಧಿಸಿಲ್ಲ. ಸಿಐಡಿ ಅಧಿಕಾರಿಗಳು ಸಹ ವಿಚಾರಣೆಗೆ ಒಳಪಡಿಸಿಲ್ಲ. ಇದನ್ನೆಲ್ಲ ಗಮನಿಸಿದರೆ ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಬಹುದು ಎನ್ನುವ ಅನುಮಾನ ಹುಟ್ಟಿದೆ' ಎಂದರು.

'ಯಾರು ಕೂಡ ಈ ಪ್ರಕರಣವನ್ನು ಜಾತಿ, ಧರ್ಮಕ್ಕೆ ಬಳಸಿಕೊಳ್ಳಬಾರದು. ನೊಂದ ಹೆತ್ತರಿಗೆ ಸಮಾಧಾನವಾಗುವ ರೀತಿಯಲ್ಲಿ ವರ್ತಿಸಬೇಕು' ಎಂದು ವಿನಂತಿಸಿದರು.

'ಸರ್ಕಾರ ಪ್ರಕರಣವನ್ನು ಗಂಭೀರವಾಗಿದುಕೊಂಡಿಲ್ಲ. ತನಿಖೆಯಲ್ಲಿ ಯಾವ ಪ್ರಗತಿಯೂ ಕಂಡಿಲ್ಲ. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸವಾಲು ಎದ್ದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ತಕ್ಷಣ ಸಿಐಡಿಯಿಂದ ಸಿಬಿಐ ಹಸ್ತಾಂತರಿಸಬೇಕು' ಎಂದು ಒತ್ತಾಯಿಸಿದರು.

'ಹಿಂದುಗಳು ಕೊಲೆಯಾದರೆ ಬಿಜೆಪಿಗೆ ಹಬ್ಬ' ಎನ್ನುವ ಸಚಿವ ಸಂತೋಷ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, 'ಬೆಂಗಳೂರಿನ ಕಾಂಗ್ರೆಸ್ ಶಾಸಕ ಅಂಖಂಡ ಶ್ರೀನಿವಾಸ ಅವರ ನಿವಾಸಕ್ಕೆ ಬೆಂಕಿ ಹಚ್ಚಿದಾಗ, ಅಂದಿದ್ದ ಕಾಂಗ್ರೆಸ್ ಸರ್ಕಾರ ಅವರಿಗೆ ಸಾಂತ್ವನ ಸಹ ಹೇಳಲು ಹೋಗಿಲ್ಲ. ಮಾನವೀಯತೆ ಮರೆತು ವರ್ತಿಸುವುದು ಕಾಂಗ್ರೆಸ್ ಸಂಸ್ಕೃತಿ. ಇಂಥ ಪ್ರಕರಣದಲ್ಲಿ ರಾಜಕೀಯ ಬಿಟ್ಟು ಮನುಷ್ಯತ್ವದ ಆಧಾರದಲ್ಲಿ ಧೈರ್ಯ ತುಂಬಬೇಕು. ದಿಕ್ಕು ತಪ್ಪಿಸುವ ಹೇಳಿಕೆ ನೀಡಿದಾಗಲೂ ನಾವು ಸುಮ್ಮನೇ ಕೂರಬೇಕೆ' ಎಂದು ಪ್ರಶ್ನಿಸಿದರು.

ಶಾಸಕ ಮಹೇಶ ಟೆಂಗಿನಕಾಯಿ, ಹು-ಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ಶಿವು ಮೆಣಸಿನಕಾಯಿ ಇದ್ದರು.
.ನೇಹಾ ಕೊಲೆ: ಕಾಂಗ್ರೆಸ್ ವಿರುದ್ಧ ಆಕ್ರೋಶ, ಕಠಿಣ ಶಿಕ್ಷೆಗೆ ಆಗ್ರಹ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.