ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 22 ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಗಳಿಗೆ ಚುನಾವಣೆ ಇದೇ 20 ರಂದು ನಡೆಯಲಿದೆ ಎಂದು ಪಾಲಿಕೆ (ಚುನಾವಣೆ) ಅಧ್ಯಕ್ಷಾಧಿಕಾರಿಯೂ ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಪಿ.ಸುನೀಲಕುಮಾರ ತಿಳಿಸಿದ್ದಾರೆ.

20ರಂದು ಧಾರವಾಡದ ಪಾಲಿಕೆಯ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಭಾಭವನದಲ್ಲಿಬೆಳಿಗ್ಗೆ 9 ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭಿಸಲಾಗುವುದು.

ಮೇಯರ್ ಸ್ಥಾನ: ಸಾಮಾನ್ಯ ಮಹಿಳೆ ಹಾಗೂ ಉಪಮೇಯರ್ ಸ್ಥಾನ: ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಗೊಳಿಸಲಾಗಿದೆ.

ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆ ಹಿಂತೆಗೆದುಕೊಳ್ಳುವ ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸಲಾಗುವುದು, ಫಲಿತಾಂಶ ಘೋಷಣೆ ಪ್ರಕ್ರಿಯೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.