ಹುಬ್ಬಳ್ಳಿ: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸತೀಶ್ ಸೈಲ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬೇಲೇಕೇರಿ ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ನ್ಯಾಯಾಲಯವು ಸತೀಶ್ ಸೈಲ್ ಅವರಿಗೆ ಜೈಲು ಶಿಕ್ಷೆ ವಿಧಿಸಿದೆ. 2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಗೆ ಗುರಿಯಾದವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಈ ಹಿಂದೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ವಿಧಾನಸಭಾಧ್ಯಕ್ಷರನ್ನು ಒತ್ತಾಯಿಸುತ್ತೇನೆ’ ಎಂದರು.

ಕೆಲವು ಕಾಂಗ್ರೆಸ್ ನಾಯಕರು ಸತೀಶ ಸೈಲ್ ಪರವಾಗಿ ಮಾತನಾಡುತ್ತಿದ್ದಾರೆ. ಕಳ್ಳರು, ವಂಚಕರನ್ನು ಕಾಂಗ್ರೆಸ್ ನವರು ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.