ಹುಬ್ಬಳ್ಳಿ: ನಗರದ ಹು–ಧಾ ಮಹಾನಗರ ಪಾಲಿಕೆ ಕಚೇರಿ ಬಳಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘ ನೇತೃತ್ವದಲ್ಲಿ ಪೌರಕಾರ್ಮಿಕರು ಶುಕ್ರವಾರವೂ ಉಪವಾಸ ಸತ್ಯಾಗ್ರಹ ಮುಂದುವರಿಸಿದರು.

ಪೊರಕೆ ಪ್ರದರ್ಶಿಸಿ, ತಮಟೆ ಬಾರಿಸಿ ಆಕ್ರೋಶ ವ್ಯಕ್ತಪಡಿಸಿದ ಪೌರಕಾರ್ಮಿಕರು, ಮಳೆಯಲ್ಲೂ ಧರಣಿ ನಡೆಸಿದರು.

‘ಚಳಿ–ಮಳೆಯಲ್ಲೇ ಪೌರಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದರೂ ಯಾವ ಅಧಿಕಾರಿಗಳೂ ಸ್ಪಂದಿಸುತ್ತಿಲ್ಲ. ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಅವರು ಪಾಲಿಕೆ ಕಚೇರಿಗೆ ಆಗಮಿಸಲಿದ್ದು, ಬೇಡಿಕೆಗಳ ಈಡೇರಿಗಾಗಿ ಅವರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಎಂ. ಗುಂಟ್ರಾಳ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.