ನೇಹಾ ಕೊಲೆ ಪ್ರಕರಣದ ಪ್ರಾಮಾಣಿಕ ತನಿಖೆಗೆ ಸಿಐಡಿಯಿಂದ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಶ್ರೀ ಗಜಾನನ ಮಹಾಮಂಡಳದ ಸದಸ್ಯರು ನಗರದ ದುರ್ಗದ ಬೈಲ್ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಿದರು. ಮಹಾಮಂಡಳದ ಅಧ್ಯಕ್ಷ ಡಿ. ಗೋವಿದರಾವ್ ನೇತೃತ್ವದಲ್ಲಿ ಹಾಗೂ ಅಕ್ಕಿಹೊಂಡದ ಚಂದ್ರಶೇಖರ ಸ್ವಾಮೀಜಿ ಸಮ್ಮುಖದಲ್ಲಿ ಸಂವಿಧಾನ ಸುರಕ್ಷತಾ ಸಮಿತಿ ಸದಸ್ಯರು ಸಹ ಪಾಲ್ಗೊಂಡು, ಸಿಐಡಿ ತನಿಖೆಯಲ್ಲಿ ನ್ಯಾಯ ಸಿಗುವ ಭರವಸೆಯಿಲ್ಲ. ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದರೆ ಸಿಬಿಐಗೆ ವಹಿಸಲೇಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.