ಹುಬ್ಬಳ್ಳಿ: ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ಹಾಗೂ ಬದಾಮಿಯ ಬನಶಂಕರಿ ದೇವಿ ಜಾತ್ರೆ ಅಂಗವಾಗಿ ಭಕ್ತರ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಜ.23ರಿಂದ ಜ.30ರ ತನಕ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಜಾತ್ರಾ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಸವದತ್ತಿ ರೇಣುಕಾ ಯಲ್ಲಮ್ಮ ಹಾಗೂ ಬದಾಮಿಯ ಬನಶಂಕರಿ ದೇವಿ ಜಾತ್ರೆಗಳು ಜ.23ರಿಂದ ಜ.30ರವರೆಗೆ ಜರುಗಲಿವೆ. ಭಕ್ತರ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡ ಮತ್ತು ಬನಶಂಕರಿಗೆ ಹಾಗೂ ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ಹೆಚ್ಚುವರಿ ಜಾತ್ರಾ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

‘ದೇವಿಯ ಜಾತ್ರೆ ಪ್ರಯುಕ್ತ ಹುಬ್ಬಳ್ಳಿಯಿಂದ 25. ನವಲಗುಂದದಿಂದ 10 ಬಸ್‌ಗಳು, 100ಕ್ಕೂ ಹೆಚ್ಚು ಚಾಲಕರು, ನಿರ್ವಾಹಕರು, ಮೇಲ್ವಿಚಾರಣೆಗಾಗಿ 10 ಅಧಿಕಾರಿಗಳು ಹಾಗೂ 20 ಮೇಲ್ವಿಚಾರಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಯಾಣಿಕರ ಒತ್ತಡಕ್ಕೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುವುದು’ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಜಾತ್ರೆ ವಿಶೇಷ ಬಸ್ಸುಗಳು ಹೊಸೂರು ಬಸ್ ನಿಲ್ದಾಣದಿಂದ ಹೊರಡುತ್ತವೆ.

ಹುಬ್ಬಳ್ಳಿ - ಯಲ್ಲಮ್ಮನ ಗುಡ್ಡ: ಈ ಬಸ್ಸುಗಳು ಧಾರವಾಡ, ಸವದತ್ತಿ ಮಾರ್ಗವಾಗಿ ಯಲ್ಲಮ್ಮನಗುಡ್ಡಕ್ಕೆ ಸಂಚರಿಸುತ್ತವೆ.

ಹುಬ್ಬಳ್ಳಿ-ಬನಶಂಕರಿ: ಈ ಬಸ್ಸುಗಳು ನವಲಗುಂದ, ನರಗುಂದ, ಕೊಣ್ಣೂರು, ಕುಳಗೇರಿ, ಬದಾಮಿ ಮಾರ್ಗವಾಗಿ ಸಂಚರಿಸುತ್ತವೆ.

ನವಲಗುಂದ - ಯಲ್ಲಮ್ಮನ ಗುಡ್ಡ: ಈ ಬಸ್ಸುಗಳು ನವಲಗುಂದ ಬಸ್ ನಿಲ್ದಾಣದಿಂದ ಹೊರಡುತ್ತವೆ. ಗೊಬ್ಬರ ಗುಂಪಿ ಕ್ರಾಸ್, ಅಳಗವಾಡಿ ಹಂಚಿನಾಳ, ಹಿರೇಕುಂಬಿ ಮಾರ್ಗವಾಗಿ ಸಂಚರಿಸುತ್ತವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.