ಹುಬ್ಬಳ್ಳಿ: ನೈರುತ್ಯ ರೈಲ್ವೆಯು 2018ರಲ್ಲಿ ನಡೆಸಿದ್ದ ರೈಲ್ವೆ ಟೆಕ್ನಿಷಿಯನ್ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ ನೇಮಕಾತಿ ಪತ್ರ ನೀಡಬೇಕು ಎಂದು ಆಗ್ರಹಿಸಿ, ನಗರದ ಗದಗ ರಸ್ತೆಯಲ್ಲಿರುವ ರೈಲ್ ಸೌಧದ ಎದುರು ಅಭ್ಯರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ದೇಶದ ವಿವಿಧ ಭಾಗಗಳಿಂದ ಬಂದಿದ್ದ ಅಭ್ಯರ್ಥಿಗಳು 'ನೇಮಕಾತಿ ಪತ್ರ ಬೇಗ ಕೊಡಿ' ಎಂದು ಘೋಷಣೆ ಕೂಗಿದರು. ನಾಲ್ಕು ವರ್ಷಗಳಿಂದ ವಿಳಂಬ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

320 ಟೆಕ್ನಿಷಿಯನ್ ಗಳ ಜೊತೆಗೆ, ಲೋಕೋಪೈಲಟ್ ಗಳ ನೇಮಕಾತಿಗೂ ಪರೀಕ್ಷೆ ನಡೆಸಲಾಗಿತ್ತು. ಲೋಕೋಪೈಲಟ್ ಹುದ್ದೆಗೆ ನೇಮಕವಾದವರಿಗೆ ಈಗಾಗಲೇ ನೇಮಕಾತಿ ಪತ್ರ ನೀಡಿ, ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ. ಆದರೆ, ಟೆಕ್ನಿಷಿಯನ್ ಅಭ್ಯರ್ಥಿಗಳ ವಿಷಯದಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳಕ್ಕೆ ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರು ಸೇರಿದಂತೆ, ನೇಮಕಾತಿಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬರಬೇಕು. ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಬೇಕು. ಅಲ್ಲಿಯವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದುಪಟ್ಟುಹಿಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.