ಹುಬ್ಬಳ್ಳಿ: ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳು, ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೇ ಗೂರೂಜಿ ಅವರ ಸಂಬಂಧಿಕರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮೆರೇವಾಡ ವಿರುದ್ಧ ಗುರೂಜಿ ಸಂಬಂಧಿಕರಾದ ಉದ್ಯಮಿ ಸಂಜಯ ಅಂಗಡಿ ಸೆಪ್ಟೆಂಬರ್ 2ರಂದು ದೂರು ನೀಡಿದ್ದಾರೆ.
.ಚಂದ್ರಶೇಖರ ಗುರೂಜಿ ಕೊಲೆ: ದೋಷಾರೋಪಪಟ್ಟಿ ಸಲ್ಲಿಕೆ.
2022ರ ಜುಲೈನಲ್ಲಿ ನಡೆದ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ವಿಚಾರಣೆ ಮಾಹಿತಿ ಪಡೆಯಲು, 2024ರ ಫೆ. 14ರಂದು ಸಂಜಯ ಅವರು ತಂಗಿ ಜೊತೆ ಹುಬ್ಬಳ್ಳಿ ಕೋರ್ಟ್ಗೆ ಬಂದಿದ್ದರು. ಆ ವೇಳೆ ಪೊಲೀಸರು ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳನ್ನು ವಿಚಾರಣೆಗೆ ಕರೆದುಕೊಂಡು ಬಂದಿದ್ದರು.

ವಾಪಸ್ಸು ಅವರನ್ನು ಕರೆದೊಯ್ಯುವಾಗ ಗುರೂಜಿ ಸಂಬಂಧಿಕರಿಗೆ ‘ನೀವು ಕೋರ್ಟ್ನಲ್ಲಿ ಕಂಡರೆ ಗುರೂಜಿ ತರಹ ಎತ್ತಿ ಬಿಡುತ್ತೀವಿ. ಒಂದೇ ದಿನ ಹೊರಗೆ ಬಂದರೂ ನಿಮ್ಮ ಯಾರನ್ನೂ ಬಿಡುವುದಿಲ್ಲ’ ಎಂದು ಜೀವ ಬೆದರಿಕೆ ಹಾಕಿದ್ದೂ ಅಲ್ಲದೆ, ಸುರೇಶ ಪಲ್ಲೇದ ಮೂಲಕ ಪ್ರಕರಣ ರಾಜೀ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
.ಸರಳ ವಾಸ್ತು ಚಂದ್ರಶೇಖರ ಗುರೂಜಿ ಹತ್ಯೆ: ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.