ಗದಗ: ‘ಮಳೆ ಅಭಾವದಿಂದ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಕೃಷ್ಣರಾಜ ಸಾಗರ ಅಲ್ಲದೇ ರಾಜ್ಯದ ಎಲ್ಲ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿದಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಾಮಾಜಿಕ ಸೇವಾ ಸಂಸ್ಥೆಗಳು, ಮಠಗಳು ರೈತರ ನೆರವಿಗೆ ಬರಬೇಕು. ನಾವೆಲ್ಲರೂ ರೈತ ಹೋರಾಟ ಬೆಂಬಲಿಸುತ್ತೇವೆ’ ಎಂದು ಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ತಿಳಿಸಿದರು.

‘ಸರ್ಕಾರವು ಜಾಣ್ಮೆ ಪ್ರದರ್ಶಿಸಿ, ಈ ಸಮಸ್ಯೆ ಬಗೆಹರಿಸಬೇಕು. ತಮಿಳುನಾಡು ಕೂಡ ಸಂಕಷ್ಟವನ್ನು ಅರಿತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕುವುದು ನಿಲ್ಲಿಸಬೇಕು. ಯಾವುದೇ ರೀತಿ ಹಿಂಸೆಗೆ ಆಸ್ಪದ ನೀಡದೇ ಶಾಂತಿಯುತವಾಗಿ ಹೋರಾಟ ನಡೆಸಬೇಕು’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.