ಹುಬ್ಬಳ್ಳಿ: ಪ್ರಾದೇಶಿಕ ಸಮತೋಲನಕ್ಕಾಗಿ ಇಲ್ಲಿನ ವಿಮಾನನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನನಿಲ್ದಾಣವಾಗಿ ಮೇಲ್ದರ್ಜೆಗೇರಿಸಬೇಕೆಂದು ನಗರದ ಗೋಕುಲ ರಸ್ತೆಯಲ್ಲಿರುವ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಆಗ್ರಹಿಸಲಾಯಿತು.

ರಾಜ್ಯದಲ್ಲಿ ಇನ್ನೊಂದು ಅಂತರರಾಷ್ಟೀಯ ವಿಮಾನನಿಲ್ದಾಣ ನಿರ್ಮಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದ್ದು, ಹುಬ್ಬಳ್ಳಿ ವಿಮಾನನಿಲ್ದಾಣವನ್ನೇ ಮೇಲ್ದರ್ಜೆಗೇರಿಸಲು ಕ್ರಮ ವಹಿಸಬೇಕು. ಇದರಿಂದ ಬೆಂಗಳೂರಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಎಂದು ಉದ್ಯಮಿಗಳು ಅಭಿಪ್ರಾಯಪಟ್ಟರು. ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲು ನಿರ್ಣಯಿಸಿದರು.

ಸಂಘದ ಅಧ್ಯಕ್ಷ ಗಿರೀಶ ನಲವಡಿ, ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಅವಳಿ ನಗರದ 13 ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.