ಹುಬ್ಬಳ್ಳಿ: 'ಬಿಜೆಪಿ ಆಡಳಿತದಲ್ಲಿ ಹಗರಣಗಳು ನಡೆದಿವೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಷ್ಟು ದಿನ ಏಕೆ ಸುಮ್ಮನಿದ್ದರು. ತಮ್ಮ ತಪ್ಪು ಮುಚ್ಚಿಕೊಳ್ಳಲು ಇಂತಹ ಹೇಳಿಕೆ ನೀಡಿದ್ದಾರೆ' ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದರು.

'2010, 2011, 2012ರಲ್ಲಿ ಅಕ್ರಮಗಳು ನಡೆದಿವೆ ಎಂದು ಅವರು ಆರೋಪಿಸಿದ್ದಾರೆ. ಇದಾದ ಮೇಲೆ 2013ರಲ್ಲಿ ಅವರದ್ದೆ ಸರ್ಕಾರ ಇದ್ದಾಗ ಏಕೆ ಕ್ರಮಕೈಗೊಳ್ಳಲಿಲ್ಲ. ಅಲ್ಲದೇ, ಈಗ 1 ವರ್ಷದಿಂದ ಏಕೆ ಕ್ರಮ ಕೈಗೊಂಡಿಲ್ಲ. ಈಗ ತನಿಖೆ ಮಾಡುವುದಾಗಿ ಗುಮ್ಮ ಬಿಟ್ಟಿದ್ದಾರೆ' ಎಂದು ವ್ಯಂಗ್ಯವಾಡಿದರು.

ಸರ್ಕಾರ ವಿವಿಧ ಹಗರಣಗಳಲ್ಲಿ ಭಾಗಿಯಾಗಿರುವುದರಿಂದ ಮುಖ್ಯಮಂತ್ರಿ ನೈತಿಕತೆ ಉಳಿಸಿಕೊಂಡಿಲ್ಲ. ಸಾರ್ವಜನಿಕವಾಗಿ ಮುಖ ತೋರಿಸಲು ಆಗದ ಸ್ಥಿತಿಯಲ್ಲಿದ್ದಾರೆ ಎಂದು ಕಿಚಾಯಿಸಿದರು.

ಗಾಬರಿಯಿಂದ ಏಕೆ ಉತ್ತರಿಸುತ್ತಿದ್ದಾರೆ: ತಮ್ಮ ಹೆಸರು ಹೇಳುವಂತೆ ಇ.ಡಿ. ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, 'ಒತ್ತಡ ಹೇರಿದ್ದಾರೆ ಎಂದು ಇವರಿಗೆ ಯಾರು ಹೇಳಿದರು? ಪ್ರಕರಣದಲ್ಲಿ ಇವರು ಭಾಗಿಯಾಗಿಲ್ಲವೆಂದರೆ ಏಕೆ ಗಾಬರಿಯಾಗಿ ಹೇಳಿಕೆ ಕೊಡುತ್ತಿದ್ದಾರೆ, ಇವರೇ ಏಕೆ ಊಹೆ ಮಾಡಿಕೊಳ್ಳುತ್ತಿದ್ದಾರೆ, ನಾಲ್ಕು ಜನ ಸಚಿವರಿಂದ ಏಕೆ ಹೇಳಿಕೆ ಕೊಡಿಸಿದ್ದಾರೆ ಎಂದು ಪ್ರಶ್ನಿಸಿದರು.

ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂದು ಸಿ.ಎಂ ಒಪ್ಪಿಕೊಂಡಿದ್ದಾರೆ. ಅಧಿಕಾರಗಳಿಂದ ತಪ್ಪಾಗಿದ್ದರೂ ಸರ್ಕಾರವೇ ಹೊಣೆ. ಸಚಿವರು ಮೌಖಿಕ ಆದೇಶ ನೀಡಿದ್ದಾರೆ ಎಂದು ಮೃತ ಅಧಿಕಾರಿ ಡೆತ್ ನೋಟ್ ನಲ್ಲಿ ಬರೆದುದರ ಅರ್ಥ ಏನು? ಸಿ.ಎಂ. ಉಡಾಫೆಯಿಂದ ಉತ್ತರ ಕೊಟ್ಟಿದ್ದಾರೆ ಎಂದು ಟೀಕಿಸಿದರು.

ಸಿ.ಎಂ ಭೇಟಿ ನೀಡಿಲ್ಲವೇಕೆ?: ರಾಜ್ಯದ ಕರಾವಳಿ ಭಾಗದಲ್ಲಿ, ಚಿಕ್ಕಮಗಳೂರು, ಕೊಡಗಿನಲ್ಲಿ ಅಪಾರ ಮಳೆಯಾಗಿ ಸಾಕಷ್ಟು ಹಾನಿಯಾಗಿದ್ದರೂ ಸಿ.ಎಂ ಹಾಗೂ ಸಚಿವರು ಸ್ಥಳಕ್ಕೆ ಭೇಟಿ ನೀಡದಿರುವುದು ಆಶ್ಚರ್ಯ ತಂದಿದೆ. ಜನರ ಬಗ್ಗೆ ಅವರಿಗೆ ಎಷ್ಟು ಕಾಳಜಿ ಇದೆ ಎನ್ನುವುದನ್ನು ಇದು ತೋರಿಸುತ್ತದೆ ಎಂದು ಟೀಕಿಸಿದರು.

ಪರಿಹಾರಕ್ಕಾಗಿ ಹಣ ನೀಡುವುದು ಬೇರೆ, ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಬೇಕಾಗಿತ್ತು ಎಂದು ಹೇಳಿದರು.

ಎನ್ಡಿಆರ್ಎಫ್ ಅಡಿ ಕೇಂದ್ರ ಸರ್ಕಾರ ಮಳೆ ಹಾನಿ ಪರಿಹಾರ ನೀಡಲಿದೆ. ರಾಜ್ಯ ಸರ್ಕಾರ ಎಷ್ಟು ಕೊಡುತ್ತದೆಯೋ ನೋಡೋಣ ಎಂದರು.
.ನನ್ನ ಹೆಸರಿಗೆ ಮಸಿ ಬಳಿಯುವುದೇ ಬಿಜೆಪಿ ಹುನ್ನಾರ: ಸಿದ್ದರಾಮಯ್ಯ ಆಕ್ರೋಶ.ಬಿಜೆಪಿ ಅವಧಿಯ ಎಲ್ಲ ಹಗರಣ ತನಿಖೆ: ಸಿಎಂ ಸಿದ್ದರಾಮಯ್ಯ.ಬಿಜೆಪಿ ಅವಧಿಯಲ್ಲಿ ಹಗರಣಗಳ ಸರಮಾಲೆ: ಮುಖ್ಯಮಂತ್ರಿ ಸಿದ್ದರಾಮಯ್ಯ.ಬಿಜೆಪಿ ಹಗರಣ ಬಯಲಾಗುವ ಭಯಕ್ಕೆ ಗದ್ದಲ: ಡಿ.ಕೆ. ಶಿವಕುಮಾರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.