ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಗಳೊಂದಿಗೆ ಮತ್ತೊಮ್ಮೆ ಸಭೆ ನಡೆಸಿ, ಶಾಲಾ ಶುಲ್ಕ ನಿಗದಿಗೆ ಸಂಬಂಧಿಸಿದಂತೆ ನಿಯಮ ಪಾಲನೆ ಮಾಡುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗುವುದು.
–ಎಸ್.ಎಸ್.ಕೆಳದಿಮಠ, ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ.
ಸರ್ಕಾರಿಂದ ಯಾವುದೇ ಸಹಾಯಧನ ನಮಗೆ ಬರುವುದಿಲ್ಲ. ಪ್ರತಿ ವರ್ಷ ಶಾಲಾಭಿವೃದ್ಧಿಯ ಜೊತೆಗೆ ಮಕ್ಕಳಿಗೆ ಅಗತ್ಯ ಸೌಲಭ್ಯ ನೀಡಲಾಗುತ್ತಿದೆ. ಶಿಕ್ಷಕರ ನೇಮಕ, ವೇತನ ಎಲ್ಲವನ್ನೂ ಭರಿಸಬೇಕಾಗುತ್ತದೆ. ಹೀಗಾಗಿ ಶುಲ್ಕ ಹೆಚ್ಚಳ ಅನಿವಾರ್ಯ.