ಹುಬ್ಬಳ್ಳಿ: ಹು– ಧಾ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಕ್ಕೆ 2023ರ ಜೂನ್ 20ರಂದು ನಡೆದ ಚುನಾವಣೆ ವೇಳೆ ಪಕ್ಷದ ವತಿಯಿಂದ ಅಧಿಕೃತವಾಗಿ ಜಾರಿ ಮಾಡಿದ್ದ ವಿಪ್ನ್ನು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ 54ನೇ ವಾರ್ಡ್ನ ಬಿಜೆಪಿ ಸದಸ್ಯೆ ಸರಸ್ವತಿ ವಿನಾಯಕ ಧೋಂಗಡಿ ಅವರನ್ನು ಮಹಾನಗರ ಪಾಲಿಕೆ ಸದಸ್ಯತ್ವದಿಂದ ಅನರ್ಹಗೊಳಿಸಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಆದೇಶಿಸಿದ್ದಾರೆ.

ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ) ಕಾಯ್ದೆಯನ್ನು ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

‘2ನೇ ಅವಧಿಗೆ ಮೇಯರ್– ಉಪ ಮೇಯರ್ ಚನಾವಣೆ ವೇಳೆ ಆಗಿನ ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಕಪಕಟರ್ ಅವರು ಪಕ್ಷದ ವತಿಯಿಂದ ಬಿಜೆಪಿಯ ಸದಸ್ಯರಿಗೆ ವಿಪ್ ಜಾರಿ ಮಾಡಿದ್ದರು. ಆದರೆ, ಚುನಾವಣೆ ವೇಳೆ ಪಕ್ಷದ ಸದಸ್ಯೆ ಸರಸ್ವತಿ ವಿನಾಯಕ ಧೋಂಗಡಿ ಅವರು ಗೈರಾಗಿದ್ದರು. ಪಕ್ಷದ ವಿಪ್ ಉಲ್ಲಂಘನೆ ಹಿನ್ನೆಲೆಯಲ್ಲಿ ಸಂಜಯ ಕಪಟಕರ ಅವರು ಪಾಲಿಕೆಯ ಆಯುಕ್ತರಿಗೆ ದೂರು ನೀಡಿದ್ದರು. ವಿಚಾರಣೆ ನಂತರ ಅವರ ಸದಸ್ಯತ್ವ ರದ್ದಾಗಿದೆ’ ಎಂದು ಹು-ಧಾ ಮಹಾನಗರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ’ಪ್ರಜಾವಾಣಿ’ಗೆ ತಿಳಿಸಿದರು.

‘ಉದ್ದೇಶಪೂರ್ವಕವಾಗಿ ಚುನಾವಣೆ ಪ್ರಕ್ರಿಯೆ ವೇಳೆ ಗೈರಾಗಿರಲಿಲ್ಲ. ನನಗೆ ಆರೋಗ್ಯ ಸಮಸ್ಯೆ ಇತ್ತು. ಈ ವಿಷಯವನ್ನು ವಿಚಾರಣೆಯ ವೇಳೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಇವಾಗ ಸದಸ್ಯತ್ವ ರದ್ದು ಮಾಡಿ, ಆದೇಶಿಸಲಾಗಿದೆ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು‘ ಎಂದು ಸರಸ್ವತಿ ವಿನಾಯಕ ಧೋಂಗಡಿ ’ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.