ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ದಲಿತರ ಕೇರಿಯಲ್ಲಿ ಪೇಜಾವರ ಶ್ರೀ ಪಾದಯಾತ್ರೆ

Published 12 ಅಕ್ಟೋಬರ್ 2023, 4:05 IST
Last Updated 12 ಅಕ್ಟೋಬರ್ 2023, 4:05 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿಯ ಭುವನೇಶ್ವರಿ ನಗರದ ದಲಿತರ ಕಾಲೊನಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಪಾದಯಾತ್ರೆ ನಡೆಸಿದರು.

ಪಾದಯಾತ್ರೆ ಆರಂಭವಾಗುತ್ತಿದ್ದಂತೆ ಭಕ್ತರು ಹೂವುಗಳನ್ನು ಸುರಿದು, ಭಕ್ತಿ ಸಮರ್ಪಿಸಿದರು. ಜೈ ಶ್ರೀ ರಾಮ, ಬೋಲೋ ಭಾರತಮಾತಾ ಕಿ ಜೈ ಎಂದು ಘೋಷಣೆ ಕೂಗಿದರು‌.

ಬಳಿಕ ವಿಶ್ವ ಹಿಂದೂ ಪರಿಷತ್ ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲೋಟಿ ಅವರ ಮನೆಗೆ ಭೇಟಿ ನೀಡಿದರು. ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾರಕ ಬಸವರಾಜ್ ಅವರು ಕುಟುಂಬ ಸದಸ್ಯರನ್ನು ಶ್ರೀಗಳಿಗೆ ಪರಿಚಯಿಸಿದರು.

ಕಾಲೊನಿಯ ಭುವನೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ ಪೂಜೆ ಸಲ್ಲಿಸಿ, ಆರತಿ ಬೆಳಗಿದರು.

ದೇವಸ್ಥಾನದಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, 'ನಾವೆಲ್ಲರೂ ಸನಾತನ ಧರ್ಮೀಯರು. ರಾಮ ಆದರ್ಶ ಪುರುಷ. ಶತಮಾನಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗುತ್ತಿದೆ' ಎಂದರು.

'ಜಗತ್ತೆಲ್ಲ ಸುಖವಾಗಿದಯೆಂದರೆ ರಾಮ‌ ಕಾರಣ. ರಾವಣ ಕೆಟ್ಟ ಗುಣದ ಸಂಕೇತ. ಸುಖ, ಸಂತೋಷಕ್ಕೆ ರಾಮನ ಆರಾಧನೆ ಮಾಡೋಣ' ಎಂದು ಹೇಳಿದರು.

ಇನ್ನೊಬ್ಬರನ್ನು ಬಡಿಯುತ್ತೇವೆ, ಕಡಿಯುತ್ತೇವೆ ಎನ್ನುವುದು ರಾವಣನ ಗುಣ. ಎಲ್ಲರೂ ರಾಮನ ಜಪ ಮಾಡೋಣ. ಮಕರ ಸಂಕ್ರಮಣದ ನಂತರ ರಾಮಮಂದಿರ ಉದ್ಘಾಟನೆ ಆಗಲಿದೆ. ಐದು ದೀಪಗಳನ್ನು ಬೆಳಗುವ ಮೂಲಕ ಎಲ್ಲರು ರಾಮನ ಆರಾಧನೆ ಮಾಡೋಣ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT