ಅಣ್ಣಿಗೇರಿ: ನವಲಗುಂದ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಶಂಕರಪಾಟೀಲ ಮುನೇನಕೊಪ್ಪ ಕ್ಷೇತ್ರದಲ್ಲಿ ಒಂದು ಕಡೆ ಪ್ರಚಾರ ಕೈಗೊಂಡರೆ, ಪತ್ನಿ ಪ್ರಭಾವತಿ ಮುನೇನಕೊಪ್ಪ ಕ್ಷೇತ್ರದ ಮತ್ತೊಂದು ಕಡೆ ತಮ್ಮ ಸಂಗಡಿಗರೊಂದಿಗೆ ಪತಿಯ ಪರ ಮತಯಾಚನೆ ಮಾಡುತ್ತಿದ್ದಾರೆ.

ಕ್ಷೇತ್ರದಲ್ಲಿ ಈಗಾಗಲೇ ನನ್ನ ಪತಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಅವರು ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಕೈಗೊಂಡ ಯೋಜನೆಗಳು ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಿವೆ. ಪ್ರಧಾನಿ ಮೋದಿ ಅವರ ಕನಸಿನ ಯೋಜನೆಗಳು ಇಂದು ಸಾಕಾರಗೊಂಡಿರುವುದು ನಮ್ಮೆಲ್ಲರಿಗೂ ತೃಪ್ತಿದಾಯಕವಾಗಿದೆ ಎಂದರು.

ಕ್ಷೇತ್ರದಲ್ಲಿ ಇನ್ನು ಹೆಚ್ಚಿನ ಅಭಿವೃದ್ದಿ ಕಾರ್ಯಗಳು ಹಾಗೂ ಹೊಸ, ಹೊಸ ಯೋಜನೆ ಬಾಕಿ ಉಳಿದುಕೊಂಡಿವೆ. ಆದ್ದರಿಂದ ಮತ್ತೊಮ್ಮೆ ತಾವೆಲ್ಲರೂ ಬಿಜೆಪಿಗೆ ಮತ ಹಾಕುವ ಮೂಲಕ ಆಶೀರ್ವಾದ ಮಾಡಬೇಕು. ಈಗಾಗಲೇ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತು ಪಟ್ಟಿಯನ್ನು ಮತದಾರರಿಗೆ ನೀಡುವ ಮೂಲಕ ಕೈ ಮುಗಿದು ಮತಯಾಚಿಸಿದರು.

ನವಲಗುಂದ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಮಹಿಳಾ ಕಾರ್ಯಕರ್ತರು ಪ್ರಭಾವತಿ ಮುನೇನಕೊಪ್ಪ ಅವರಿಗೆ ಸಾಥ್ ನೀಡಿರುವುದು ಎಲ್ಲರ ಗಮನ ಸೆಳೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.