ತುಮಕೂರು: ‘ಅಪ್ಪ, ಮಕ್ಕಳು, ಮೊಮ್ಮಕ್ಕಳು, ಹೆಂಡತಿಯರು ಎಲ್ಲರೂ ದೋಚಲು ಶುರು ಮಾಡಿದ್ದಾರೆ’ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಎಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟದಲ್ಲಿ ಭಾನುವಾರ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಮಾತನಾಡಿದರು.

‘ಚಿಕ್ಕನಾಯಕನಹಳ್ಳಿ ತಾಲ್ಲೂಕು ಅಭಿವೃದ್ಧಿಯಾಗಿಲ್ಲ. ಮಾಧುಸ್ವಾಮಿ ಮಾತ್ರ ಅಭಿವೃದ್ಧಿಯಾಗಿದ್ದಾರೆ ಎಂದು ಕುಮಾರಸ್ವಾಮಿ ಬಾಯಿ ಬಡಿದುಕೊಳ್ಳು ತ್ತಿದ್ದಾರೆ. ಅವರಪ್ಪನನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸೋಕೆ ಬಾರದವನು, ಈಗ ನಮ್ಮ ಕ್ಷೇತ್ರಕ್ಕೆ ಬಂದು ಭಾಷಣ ಮಾಡುತಿದ್ದಾನೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರ ಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಹರಿಹಾಯ್ದರು.

‘ಇವರಪ್ಪನಿಗೆ ಹೊಳೆನರಸೀಪುರದಲ್ಲಿ ₹50 ರೂಪಾಯಿ ಕೊಟ್ಟು ಅಯ್ನೋರು ಕಾಂಟ್ರಾಕ್ಟ್ ಶುರು ಮಾಡಿಸಿದ್ದರು. ನನಗೆ ಆ ಸ್ಥಿತಿ ಬಂದಿಲ್ಲ. ಇವರ ಹಾಗೆ ದೋಚಿದ್ದು, ಬಾಚಿದ್ದು ನಂಬಿಕೊಂಡು ನಾನು ಬದುಕಲ್ಲ’ ಎಂದರು.

‘ನಮ್ಮ ಕ್ಷೇತ್ರದಲ್ಲಿ ನಾನು ಯಾರ ಜೊತೆ ಹೋರಾಟ ಮಾಡುತ್ತಿದ್ದೇನೆ ಎಂಬುವುದು ತಿಳಿಯುತ್ತಿಲ್ಲ. ಅದಕ್ಕೆ ನಾನು ಸಿದ್ದರಾಮಯ್ಯ ಅವರನ್ನು ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಬನ್ನಿ ಎಂದು ಕರೆದಿದ್ದೆ. ಚುನಾವಣೆಯಲ್ಲಿ ಸೆಣಸಾಡುವುದಕ್ಕೂ ಗೌರವ ಇರುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.