ಗದಗ: ‘ಸಿಎಂ ಸ್ಥಾನ ಖಾಲಿ ಇಲ್ಲ. ಖಾಲಿಯಾಗುವ ಪ್ರಶ್ನೆಯೂ ಇಲ್ಲ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.

‘ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ, ನಾಯಕರು. ಅನವಶ್ಯಕವಾಗಿ ಗೊಂದಲ ಸೃಷ್ಟಿ ಮಾಡಬಾರದು. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಮಾಧ್ಯಮಗಳಿಗೂ ಗೊತ್ತಿದೆ. ಮುಂದಿನ ಮುಖ್ಯಮಂತ್ರಿ ಚರ್ಚೆಗೆ ಇದು ಸಮಯವೂ ಅಲ್ಲ. ವಿವೇಕ ಇದ್ದವರು ಅನವಶ್ಯಕ ಚರ್ಚೆ ಮಾಡುವುದಿಲ್ಲ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಅಮೆರಿಕ ಪ್ರವಾಸದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಾದಕ್ಕೆ ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ರಾಹುಲ್ ಗಾಂಧಿ ಅವರನ್ನು ಎಷ್ಟೇ ಅವಹೇಳನ ಮಾಡಿದರೂ ಜನರು ಅವರನ್ನು ನಾಯಕ ಅಂತ ಗುರುತಿಸಿದ್ದಾರೆ. ರಾಹುಲ್ ಹೇಳಿಕೆ ಕೊಟ್ಟಿರುವುದನ್ನು ಗಮನಿಸಿ ತಿದ್ದಿಕೊಳ್ಳುವ ಪ್ರಯತ್ನವನ್ನು ಬಿಜೆಪಿ ಮಾಡಬೇಕು’ ಎಂದು ತಿರುಗೇಟು ನೀಡಿದರು.

ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಶೀಘ್ರ ಸರ್ವಪಕ್ಷದ ಸಭೆ ಕರೆದು, ನಿಯೋಗವನ್ನು ಯಾವಾಗ ಕರೆದೊಯ್ಯಬೇಕು ಎಂಬುದರ ಬಗ್ಗೆ ಚರ್ಚಿಸಲಾಗುವುದು. ನಮ್ಮ ಪ್ರಯತ್ನ ಯಶಸ್ವಿ ಆಗದಿದ್ದಲ್ಲಿ ಕಾನೂನಾತ್ಮಕ ಹೋರಾಟ ಅನಿವಾರ್ಯ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.