ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಪ್ರವಾಸ ಇಂದು

Published 20 ಜುಲೈ 2024, 14:01 IST
Last Updated 20 ಜುಲೈ 2024, 14:01 IST
ಅಕ್ಷರ ಗಾತ್ರ

ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಭಾನುವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಿಗ್ಗೆ 10ಕ್ಕೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಹಾಗೂ ಗದಗ ಜಿಲ್ಲಾ ವಕೀಲರ ಸಂಘದ ವತಿಯಿಂದ ಗದಗ ಜಿಲ್ಲಾ ವಕೀಲರ ಸಂಘದ ಸಭಾಂಗಣದಲ್ಲಿ ಏರ್ಪಡಿಸಿರುವ ಕಾನೂನು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1ಕ್ಕೆ ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಶಿವಾನುಭವ ಮಂಟಪದಲ್ಲಿ ಗದಗ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ಆಯೋಜಿಸಿರುವ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8.30ಕ್ಕೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT