ನರಗುಂದ: ಭಾರತೀಯ ಸಂವಿಧಾನ ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ. ಇದರ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕೆಂದು ಸಹಾಯಕ ಸರ್ಕಾರಿ ಅಭಿಯೋಜಕ ಜಗತ್ತ ನಾಯಕ ಕಣವಿ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪಶು ಸಂಗೋಪನೆ ಇಲಾಖೆ, ತೋಟಗಾರಿಕೆ ಇಲಾಖೆ, ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಪೊಲೀಸ ಇಲಾಖೆಗಳ ಆಶ್ರಯದಲ್ಲಿ ಮಂಗಳವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಸಂವಿಧಾನವು ನಾಗರಿಕ ಹಕ್ಕುಗಳ ರಕ್ಷಣೆ, ಮೂಲಭೂತ ಹಕ್ಕುಗಳು,ಕರ್ತವ್ಯಗಳನ್ನು ಹೊಂದಿದೆ. ಜನಾಂಗ, ಜನ್ಮಸ್ಥಳ, ಧರ್ಮ, ಜಾತಿ ಅಥವಾ ಲಿಂಗವನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ ಮೂಲಭೂತ ಹಕ್ಕುಗಳು ಸಾರ್ವತ್ರಿಕವಾಗಿ ಅನ್ವಯಿಸುತ್ತವೆ. ಭಾರತೀಯ ದಂಡ ಸಂಹಿತೆ ಮತ್ತು ಇತರ ಕಾನೂನುಗಳು ಈ ಹಕ್ಕುಗಳ ಉಲ್ಲಂಘನೆಗೆ ಶಿಕ್ಷೆಯನ್ನು ಸೂಚಿಸುತ್ತವೆ. ಜೊತೆಗೆ ಎಲ್ಲವೂ ನ್ಯಾಯಾಂಗದ ವಿವೇಚನೆಗೆ ಒಳಪಟ್ಟಿರುತ್ತದೆ’ ಎಂದರು.

ನವೆಂಬರ್ 26 ವಿಶೇಷ ದಿನವಾಗಿದೆ. ವಿದ್ಯಾರ್ಥಿಗಳು, ನಾಗರಿಕರು ಸಂವಿಧಾನದ ಬಗ್ಗೆ ಸಮಗ್ರ ಅಧ್ಯಯನ ಮಾಡಬೇಕು ಎಂದು ಕಣವಿ ಹೇಳಿದರು.

ಅಧ್ಯಕ್ಷತೆ ವಹಿಸಿ ಪ್ರಾಚಾರ್ಯ ಆನಂದಕುಮಾರ ಲಾಳಸಂಗಿ ಮಾತನಾಡಿ, ‘ಸಂವಿಧಾನ ನಮಗೆ ಎಲ್ಲ ರೀತಿಯ ಗೌರವವನ್ನು ಒದಗಿಸಿದೆ. ಅದಕ್ಕೆ ಅನುಗುಣವಾಗಿ ನಾವು ನಡೆಯಬೇಕು. ಸಂವಿಧಾನ ಬದ್ಧವಾಗಿ ಜೀವನ ನಡೆಸಿದರೆ ಉತ್ತಮ ನಾಗರಿಕರಾಗಲು ಸಾಧ್ಯ’ ಎಂದರು.

ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲರಿಗೂ ಬೋಧಿಸಲಾಯಿತು. ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗುರುನಾಥ ಹೂಗಾರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಎಂ.ಬಡಿಗೇರ, ವೈದ್ಯಾಧಿಕಾರಿ. ಡಾ.ಆರ್.ಸಿ.ಕೊರವನವರ, ಬಸವರಾಜ ಬಾಗಿ, ಎಚ್.ಎಮ್.ಕುದಾವಂದ, ರಾಘವೇಂದ್ರ ಸಜ್ಜನರ, ವಿ.ಎಸ್.ದೇಶಪಾಂಡೆ, ಎಂ.ಬಿ.ಕುಲಕರ್ಣಿ, ಕೆ.ಎಸ್.ಹೂಲಿ, ಆರ್.ಆರ್.ನಾಯ್ಕರ, ಜೆ.ಸಿ.ಬೋಗಾರ, ಡಿ.ಬಿ.ಯಲಿಗಾರ ಹಾಗೂ ಬೋಧಕ/ಬೋಧಕೇತರ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.