ಗದಗ: ‘2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ರೈತರಿಂದ ಎಫ್ಎಕ್ಯು ಗುಣಮಟ್ಟದ ಬಿಳಿ ಜೋಳ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಅಡಿಯಲ್ಲಿ ಜೋಳ ಕೃಷಿ ಹುಟ್ಟುವಳಿ ಖರೀದಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸರ್ಕಾರದ ಮಾನದಂಡಗಳ ಅನ್ವಯ ಎಫ್ಎಕ್ಯು ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್ಗಳನ್ನು ನೇಮಿಸಬೇಕು’ ಎಂದು ಸೂಚಿಸಿದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ್ ಹೆಗ್ಗಳಗಿ ಮಾತನಾಡಿ, ‘ಸರ್ಕಾರದ ಆದೇಶದ ಅನ್ವಯ ಮುಂಗಾರು ಋತುವಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್ಎಕ್ಯು ಗುಣಮಟ್ಟದ ಬಿಳಿಜೋಳ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಸಂಸ್ಥೆಯನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ಆದೇಶಿಸಿದೆ. ಸರ್ಕಾರದ ಆದೇಶದ ಅನ್ವಯ ಬಿಳಿಜೋಳ- ಹೈಬ್ರೀಡ್ - ಪ್ರತಿ ಕ್ವಿಂಟಲ್ಗೆ ₹ 3,371 ಹಾಗೂ ಬಿಳಿ ಜೋಳ -ಮಾಲ್ದಂಡಿ ಪ್ರತಿ ಕ್ವಿಂಟಲ್ಗೆ ₹ 3,421 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ’ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆ ಖರೀದಿ ಮಾರ್ಗಸೂಚಿಗಳ ಅನ್ವಯ ಬಿಳಿ ಜೋಳ ಉತ್ಪನ್ನ ಖರೀದಿಗೆ ಡಿ. 1ರಿಂದ ನೋಂದಣಿ ಕಾರ್ಯ ಕೈಗೊಳ್ಳಲಾಗುವುದು. 2025ರ ಜ. 1ರಿಂದ ಮಾರ್ಚ್ 31ರ ಅವಧಿಯಲ್ಲಿ ಖರೀದಿ ಪ್ರಕ್ರಿಯೆ ನಡೆಸಲಾಗುವುದು. ಜಿಲ್ಲೆಯ 4 ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.

ಸಹಕಾರ ಸಂಘಗಳ ಇಲಾಖೆಯ ಉಪನಿಬಂಧಕರು, ಕೃಷಿ ಉತ್ಪನ್ನ ಮಾರುಕಟ್ಟಿ ಸಮಿತಿ ಕಾರ್ಯದರ್ಶಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಜೋಳ ಖರೀದಿ ಕೇಂದ್ರಗಳು

ಗದಗ: ಎಪಿಎಂಸಿ ಮಾರುಕಟ್ಟೆ ಪ್ರಾಂಗಣ

ಲಕ್ಷ್ಮೆಶ್ವರ: ಎಪಿಎಂಸಿ ಮಾರುಕಟ್ಟೆ ಪ್ರಾಂಗಣ

ಮುಂಡರಗಿ; ಎಪಿಎಂಸಿ ಮಾರುಕಟ್ಟೆ ಪ್ರಾಂಗಣ

ರೋಣ: ಎಪಿಎಂಸಿ ಮಾರುಕಟ್ಟೆ ಪ್ರಾಂಗಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.