ಗದಗ: ‘ಕಾನೂನು ನೆರವು ಅಭಿರಕ್ಷಕರು, ಪ್ಯಾನೆಲ್ ವಕೀಲರು ಹಾಗೂ ಪ್ರಾಧಿಕಾರಕ್ಕೆ ನೂತನವಾಗಿ ಆಯ್ಕೆಯಾದ ಅರೆಕಾಲಿಕ ಕಾನೂನು ಸ್ವಯಂ ಸೇವಕರು (ಪಿಎಲ್ವಿ) ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಸವರಾಜ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದಿಂದ ಪ್ಯಾನೆಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು ಹಾಗೂ ನೂತನವಾಗಿ ಆಯ್ಕೆಯಾದ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಹೊಸದಾಗಿ ನೇಮಕಗೊಂಡ ಪಿಎಲ್ವಿಗಳು ಪ್ರಾಧಿಕಾರದ ಉದ್ದೇಶಗಳ ಬಗ್ಗೆ ಉಚಿತ ಕಾನೂನು ನೆರವಿನ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿ, ಅಸಹಾಯಕರಿಗೆ ಉಚಿತ ಕಾನೂನು ಸೇವೆಗಳ ಸೌಲಭ್ಯ ತಲುಪಿಸಬೇಕು. ಲೋಕ ಅದಾಲತ್ ಹಾಗೂ ಮಧ್ಯಸ್ಥಿಕೆ ಕೇಂದ್ರಗಳ ಸೌಲಭ್ಯಗಳ ಸದುಪಯೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.

‘ಜನರಿಗೆ ಅನುಕೂಲವಾಗಲಿ ಎಂದು ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಮುಂಭಾಗದಲ್ಲಿ ಪ್ರತಿದಿನ ಇಬ್ಬರು ವಕೀಲರು ಸಲಹೆ ನೀಡಲು ಲಭ್ಯ ಇರುತ್ತಾರೆ. ಕೌಟುಂಬಿಕ ದೌರ್ಜನ್ಯಗಳಿಗೆ ಸಂಬಂಧಪಟ್ಟಂತೆ ಸಿಡಿಪಿಒ ಕಚೇರಿ, ತಹಶೀಲ್ದಾರ್ ಕಚೇರಿ, ಬಾಲ ನ್ಯಾಯಮಂಡಳಿ, ಜಿಲ್ಲಾ ಕಾರಾಗೃಹ, ಎಆರ್ಟಿ ಸೆಂಟರ್, ಜಿಲ್ಲಾಆಸ್ಪತ್ರೆಯಲ್ಲಿರುವ ಸಖಿ ಒನ್ ಸ್ಟಾಪ್ ಸೆಂಟರ್ನಲ್ಲಿ ನುರಿತ ವಕೀಲರು ಸಲಹೆ ನೀಡಲು ಲಭ್ಯವಿರುವ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಪಿಎಲ್ವಿಗಳು ಯಾವುದೇ ಶುಲ್ಕ, ಸಂಭಾವನೆ ಅಥವಾ ಸಂಬಳ ನಿರೀಕ್ಷಿಸದೇ ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಶೋಷಿತ ಹಾಗೂ ತುಳಿತಕ್ಕೊಳಗಾದ ಜನರ ಸೇವೆಗಳನ್ನು ಮಾಡಲು ಅರ್ಪಣಾ ಮನೋಭಾವದಿಂದ ತೊಡಗಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ಮಾತನಾಡಿ, ‘ಈ ತರಬೇತಿಯ ಸದುಪಯೋಗ ಪಡೆದು ಪಿಎಲ್ವಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿವಿಧ ಇಲಾಖೆಗಳು, ಎನ್ಜಿಒಗಳ ಸಹಯೋಗದಲ್ಲಿ ಮಕ್ಕಳು, ಶ್ರಮಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಸೇರಿದವರಿಗೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರಗಳ ಅಧಿನಿಯಮದಡಿಯ ಫಲಾನುಭವಿಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗೆಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು’ ಎಂದರು.

‘ಅರ್ಹ ವ್ಯಕ್ತಿಗಳಿಗೆ ಸರ್ಕಾರದ ಸೌಲಭ್ಯಗಳು ದೊರೆಯದೇ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಮಾಹಿತಿ ನೀಡಿದರೆ ಕ್ರಮ ವಹಿಸಲಾಗುವುದು. ಪ್ಯಾನಲ್ ವಕೀಲರು, ಎಲ್ಎಡಿಸಿ ವಕೀಲರು ಹಾಗೂ ಪಿಎಲ್ವಿಗಳು ತಮ್ಮ ಜವಾಬ್ದಾರಿ ಅರಿತು ನಿಸ್ವಾರ್ಥ ಮನೋಭಾವದಿಂದ ಕಾರ್ಯನಿರ್ವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ.ಹಿರೇಮನಿಪಾಟೀಲ ಮಾತನಾಡಿ, ನೂತನವಾಗಿ ಆಯ್ಕೆಯಾದ ಪಿಎಲ್ವಿಗಳು ಇಂದಿನ ತರಬೇತಿಯಿಂದ ಅಗತ್ಯ ಮಾಹಿತಿ ಪಡೆದು ಸಮಾಜಮುಖಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಜಿ.ಸಿ. ರೇಶ್ಮಿ ಅವರು, ಬಾಲಕಾರ್ಮಿಕತೆ, ಬಾಲ್ಯ ವಿವಾಹ, ಪೊಕ್ಸೋ ಕಾಯ್ದೆ, ಸಂತ್ರಸ್ಥರಿಗೆ ಪರಿಹಾರ ಯೋಜನೆ, ಪ್ಯಾನೆಲ್ ವಕೀಲರು, ಕಾನೂನು ನೆರವು ಅಭಿರಕ್ಷಕರು ಹಾಗೂ ಪಿಎಲ್ವಿಗಳ ಕಾರ್ಯವ್ಯಾಪ್ತಿ, ಕರ್ತವ್ಯಗಳ ಬಗ್ಗೆ ತಿಳಿಸಿಕೊಟ್ಟರು.

ಪಿಎಲ್ವಿ ಪರಶುರಾಮ ಕಳಗಣ್ಣವರ ಪ್ರಾರ್ಥಿಸಿದರು. ಶಿರಸ್ತೇದಾರ ಬಿ.ಎಂ.ಕುಕನೂರ ನಿರೂಪಿಸಿದರು.

Quote - ಕಾನೂನು ಸೇವಾ ಪ್ರಾಧಿಕಾರ ರಾಷ್ಟ್ರ ಮಟ್ಟದಿಂದ ತಾಲ್ಲೂಕು ಮಟ್ಟದವರೆಗೆ ಕಾರ್ಯನಿರ್ವಹಿಸುತ್ತಿದ್ದು ದೀನದಲಿತರು ಬಡವರು ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಮತ್ತು ನೆರವು ನೀಡುವುದು ಪ್ರಾಧಿಕಾರದ ಉದ್ದೇಶವಾಗಿದೆ ಬಸವರಾಜ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ

Quote - ಲೋಕ ಅದಾಲತ್ನಲ್ಲಿ ಪ್ರಕರಣ ಇತ್ಯರ್ಥಗೊಂಡಲ್ಲಿ ನ್ಯಾಯಾಲಯಕ್ಕೆ ತುಂಬಿದ ಶುಲ್ಕ ಸಂಪೂರ್ಣ ವಾಪಸ್ ನೀಡುವ ಬಗ್ಗೆ ಹಾಗೂ ಪ್ರಕರಣ ರಾಜೀ ಆದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂಬ ಬಗ್ಗೆ ಜನರಲ್ಲಿಅರಿವು ಮೂಡಿಸಬೇಕು ಶಿವನಗೌಡ್ರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ

Cut-off box - ನೆರವಿಗೆ ಸಂಪರ್ಕಿಸಿ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ: 15100

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.