ಮೀಸಲಾತಿಯಲ್ಲಿ ಅನ್ಯಾಯವಾಗಿದೆ: ಕಾಂಗ್ರೆಸ್ ಸದಸ್ಯರ ವಾದ
ಗದಗ –ಬೆಟಗೇರಿ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗ ಮೀಸಲು ಬಂದು ಹೋಗಿ 20 ವರ್ಷಗಳೇ ಆಗಿವೆ. 2004ರಲ್ಲಿ ಹಿಂದುಳಿದ ‘ಅ’ ವರ್ಗಕ್ಕೆ ಮೀಸಲು ನಿಗದಿಪಡಿಸಲಾಗಿತ್ತು. ಅಲ್ಲಿಂದ ಇಲ್ಲೀವರೆಗೆ ಹಿಂದುಳಿದ ‘ಅ’ ವರ್ಗದ ಸಮುದಾಯ ಅವಕಾಶ ವಂಚಿತ ಆಗಿದೆ ಎಂದು ಕಾಂಗ್ರೆಸ್ ಸದಸ್ಯರು ಅರ್ಜಿಯಲ್ಲಿ ತಿಳಿಸಿದ್ದಾರೆ. 2016ರಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ನೀಡಲಾಗಿತ್ತು. ಅದೇರೀತಿ 2020ರಲ್ಲೂ ಅಧ್ಯಕ್ಷ ಸ್ಥಾನವನ್ನು ಎಸ್‌ಸಿ ಮತ್ತು ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿತ್ತು. ಆದರೆ ರೋಸ್ಟರ್ ಪದ್ಧತಿ ಅನ್ವಯ ಹಿಂದುಳಿದ ‘ಅ’ ವರ್ಗಕ್ಕೆ ಮೀಸಲು ನೀಡಬೇಕಿತ್ತು. ಪ್ರಸಕ್ತ ಅಧ್ಯಕ್ಷ ಉಪಾಧ್ಯಕ್ಷ ಮೀಸಲು ಸ್ಥಾನದಲ್ಲೂ ಹಿಂದುಳಿದ ‘ಅ’ ವರ್ಗಕ್ಕೆ ಅನ್ಯಾಯ ಆಗಿದ್ದು ಚುನಾವಾಣೆ ನಡೆಸದಂತೆ ತಡೆಯಾಜ್ಞೆ ನೀಡಬೇಕು ಎಂದು ಕಾಂಗ್ರೆಸ್‌ನ ಇಬ್ಬರು ಸದಸ್ಯರು ಅರ್ಜಿ ಸಲ್ಲಿಸಿದ್ದಾರೆ. ಇವರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಸೆ.11ಕ್ಕೆ ವಿಚಾರಣೆ ದಿನ ನಿಗದಿ ಮಾಡಿ ಅಲ್ಲೀವರೆಗೆ ಚುನಾವಣೆ ನಡೆಸದಂತೆ ತಡೆಯಾಜ್ಞೆ ನೀಡಿದೆ.