ಗದಗ: ಸಚಿವ ಜಮೀರ್ಅಹ್ಮದ್ ಖಾನ್ ವಿರುದ್ದ ಕಾನೂನು ಕ್ರಮ ಕೈಗೊಂಡು, ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಜನತಾದಳ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷ ದೇವಪ್ಪ ಈ. ಮಲ್ಲಸಮುದ್ರ, ‘ಚನ್ನಪಟ್ಟಣದ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ವಕ್ಫ್ ಮತ್ತು ವಸತಿ ಸಚಿವ ಜಮೀರ್ಅಹ್ಮದ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ‘ಕಾಲಿಯಾ’ (ಕರಿಯ) ಎಂದು ಸಂಬೋಧಿಸಿದ್ದಾರೆ. ವಕ್ಫ್ ಸಚಿವರ ಈ ಮಾತು ಕರ್ನಾಟಕದ ಸಮಸ್ತ ಕುಮಾರಣ್ಣ ಅಭಿಮಾನಿಗಳಿಗೆ ಮತ್ತು ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಮನಸ್ಸಿಗೆ ನೋವು ತಂದಿದೆ ಎಂದರು.

ಉಪಾಧ್ಯಕ್ಷ ಗಿರೀಶ ಸಂಶಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎಫ್.ದೊಡ್ಡಮನಿ, ಗದಗ ಜಿಲ್ಲಾ ಮಾಧ್ಯಮ ವಕ್ತಾರ ಜಿ.ಕೆ.ಕೊಳ್ಳಿಮಠ, ಗದಗ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆನಂದ ಹಂಡಿ, ಗದಗ ತಾಲ್ಲೂಕು ಅಧ್ಯಕ್ಷ ಬಸವರಾಜ ಅಪ್ಪಣ್ಣವರ, ಪಕ್ಷದ ಹಿರಿಯರಾದ ಎಂ.ಎಸ್.ಪರ್ವತಗೌಡ್ರ, ರಮೇಶ ಅರಹುಣಸಿ, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ತಿಪ್ಪಣ್ಣ ಹುಡೇದ, ಕಾನೂನು ಘಟಕದ ಅಧ್ಯಕ್ಷ ಜೋಸೆಫ್ ಉದೋಜಿ, ಪಿ.ಬಿ.ಗಾಳಿ, ಶಿರಹಟ್ಟಿ ಮುಖಂಡ ಡಾ. ಶರಣಪ್ಪ ಹೂಗಾರ, ನಗರ ಘಟಕದ ಅಧ್ಯಕ್ಷ ಪ್ರಫುಲ್ ಪುಣೇಕರ, ಗದಗ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಂತೋಷ ಪಾಟೀಲ ಸೇರಿದಂತೆ ಹಲವು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.