ಗಜೇಂದ್ರಗಡ: ‘ಜಿಂಕೆ ಹಾವಳಿಯಿಂದ ಬೆಳೆ ರಕ್ಷಿಸಿಕೊಳ್ಳಲು ಸೋಲಾರ್ ಬೇಲಿ ನಿರ್ಮಿಸಿಕೊಳ್ಳಲು ರೈತರಿಗೆ ಸಹಾಯಧನ ನೀಡುವ ಹಲವು ಯೋಜನೆಗಳು ಈಗಾಗಲೇ ಜಾರಿಯಲ್ಲಿವೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಅರಣ್ಯ ಮತ್ತು ಪರಿಸರ ಸಚಿವ ಆರ್.ಶಂಕರ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗದಗ, ಹಾವೇರಿ, ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಜಿಂಕೆಗಳ ಹಾವಳಿಯಿಂದ ಬೆಳೆ ಹಾನಿಯಾಗಿರುವುದು ಗಮನಕ್ಕೆ ಬಂದಿದೆ. ಸೌರ ಬೇಲಿ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದ್ದರೂ, ರೈತರು ಇದಕ್ಕೆ ಆಸಕ್ತಿ ತೋರಿಸುತ್ತಿಲ್ಲ’ ಎಂದರು.

‘ರಾಜ್ಯದಾದ್ಯಂತ ರಸ್ತೆಯ ಬದಿಯಲ್ಲಿ ಸಸಿಗಳನ್ನು ನೆಟ್ಟು ಬೆಳೆಸಲು ಯೋಜನೆ ರೂಪಿಸಲಾಗಿದೆ. ಪ್ರತಿ ತಾಲ್ಲೂಕಿನಲ್ಲಿ ಟ್ರೀ ಪಾರ್ಕ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು’ ಎಂದರು.

‘ಕೆ.ಬಿ.ಕೋಳಿವಾಡ ಅವರು ಸೋಲಿನ ಹತಾಶೆಯಿಂದ, ಸಿದ್ದರಾಮಯ್ಯ ವಿರುದ್ಧ ಬೊಟ್ಟು ಮಾಡುವುದು ಸರಿಯಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಎಚ್.ಎಸ್.ಸೋಂಪುರ, ರಾಜು ಸಾಂಗ್ಲಿಕರ, ಅಂದಪ್ಪ ಬಿಚ್ಚುರ, ಮುತ್ತಣ್ಣ ಕೊಪ್ಪಳ, ಅರ್ಜುನ ರಾಠೋಡ ಇದ್ದರು.

ರೋಣ ವರದಿ: ಕಾಂಗ್ರೆಸ್ ಮುಖಂಡ ಜಿ.ಎಸ್.ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದ ಆರ್.ಶಂಕರ ಅವರಿಗೆ, ಜಿಂಕೆ ಹಾವಳಿ ತಡೆಗೆ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಜಗ್ಗಲ ಆಗ್ರಹಿಸಿದರು.ವಿ.ಆರ್.ಗುಡಿಸಾಗರ, ಸಂಗು ನವಲಗುಂದ, ಕೆ.ಕೆ.ಮುಲ್ಲಾ, ಸುರೇಶ ಜಗ್ಗಲ, ಹನುಮಂತ ನಾಗರಾಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.