ಗದಗ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ಕಪ್ಪತ್ತಗುಡ್ಡದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಬಂದ 28 ಪ್ರಸ್ತಾವಗಳನ್ನು ಮುಂದೂಡಿರುವುದು ನೆಮ್ಮದಿಯನ್ನುಂಟು ಮಾಡುವ ವಿಷಯವಾಗಿದ್ದರೂ, ರಾಜ್ಯ ವನ್ಯಜೀವಿ ಮಂಡಳಿ ಆ ಪ್ರಸ್ತಾವಗಳನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕಿತ್ತು’ ಎಂದು ಡಂಬಳ-ಗದಗ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

‘ಕಪ್ಪತ್ತಗುಡ್ಡದ ಸೂಕ್ಷ್ಮವಲಯ ವ್ಯಾಪ್ತಿಯನ್ನು ರಾಜ್ಯ ಸರ್ಕಾರ 10 ಕಿ.ಮೀ. ಎಂದು ಸ್ಪಷ್ಟವಾಗಿ ಘೋಷಿಸುವುದಲ್ಲದೆ ಆ ಪ್ರದೇಶದಲ್ಲಿ ಯಾವುದೇ ಗಣಿಗಾರಿಕೆ ನಡೆಸದಂತೆ ಸ್ಪಷ್ಟ ಆದೇಶ ನೀಡಬೇಕು. ಈಗ ಬಂದಿದ್ದ 28 ಪ್ರಸ್ತಾವಗಳನ್ನು ಕೇವಲ ಮುಂದೂಡಲಾಗಿದೆ. ಇದರಿಂದ ಆತಂಕ ದೂರವಾಗಿಲ್ಲ. ಬದಲಾಗಿ, ಈ ವಿಷಯ ಇನ್ನೂ ತೂಗುಗತ್ತಿಯಂತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಕಪ್ಪತ್ತಗುಡ್ಡವು ಜೀವವೈವಿಧ್ಯ ಹಾಗೂ ಸಸ್ಯವೈವಿಧ್ಯಗಳ ಪ್ರದೇಶವಾಗಿದ್ದು, ಮಧ್ಯ ಕರ್ನಾಟಕದ ಸಹ್ಯಾದ್ರಿ ಎನಿಸಿದೆ. ಸಾವಿರಾರು ವನಸ್ಪತಿ ಸಸ್ಯಗಳ ಆಗರವಾಗಿರುವ ಈ ಪ್ರದೇಶದಲ್ಲಿ ಗಣಿಗಾರಿಕೆ ನಡೆಸುವುದು ಜೀವಸಂಕುಲಕ್ಕೆ ಮಾರಕ. ಯಾವಕಾಲಕ್ಕೂ ಈ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ಕಲ್ಪಿಸಿಕೊಡಬಾರದು’ ಎಂದು ಆಗ್ರಹಿಸಿದ್ದಾರೆ.

‘ಬೆಳಗಾವಿಯ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಿದ್ದು ಸ್ವಾಗತಾರ್ಹ. ಗದಗ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಇರುವ ಸಮಿತಿಯಲ್ಲಿ ಈ ಭಾಗದ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳನ್ನು ಮತ್ತು ಪರಿಸರ ಉಳಿವಿಗಾಗಿ ನಿರಂತರ ಹೋರಾಟ ಮಾಡಿಕೊಂಡು ಬಂದಿರುವ ಪರಿಸರ ಪ್ರೇಮಿಗಳನ್ನು ಸದಸ್ಯರನ್ನಾಗಿ ಸೇರಿಸಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.