ಗದಗ: ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಶೂಟಿಂಗ್ ಕ್ರೀಡಾಕೂಟದಲ್ಲಿ ನಗರದ ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿಗಳಾದ ಮನ್ವಿತಾ ಬಡ್ನಿ ಹಾಗೂ ಅಮೃತಾ ಕಬಾಡಿ ಉತ್ತಮ ಸಾಧನೆ ಮಾಡಿದ್ದಾರೆ.

ಏರ್ ರೈಫಲ್ ಪಿಪ್ ಸೈಟ್ ಶೂಟಿಂಗ್ ಸ್ಪರ್ಧೆಯಲ್ಲಿ ಮನ್ವಿತಾ ಬಡ್ನಿ ತೃತೀಯ ಸ್ಥಾನ ಪಡೆದು ಕಂಚಿನ ಪದಕದೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲೆಯ ಕೀರ್ತಿ ಬೆಳಗಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರ್ಮನ್ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿ ಪದಾಧಿಕಾರಿಗಳಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ಉಡುಪಿ ದೇಶಪಾಂಡೆ, ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರೊ. ರಾಹುಲ್ ಒಡೆಯರ್, ಆಡಳಿತಾಧಿಕಾರಿ ಎಂ.ಸಿ.ಹಿರೇಮಠ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.