ಸೋಮವಾರ, 1 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನರಗುಂದ | ರೈತ ಹುತಾತ್ಮ ದಿನ ಅರ್ಥಪೂರ್ಣವಾಗಿ ಆಚರಿಸಿ: ತಳವಾರ

Published 29 ಜೂನ್ 2024, 16:17 IST
Last Updated 29 ಜೂನ್ 2024, 16:17 IST
ಅಕ್ಷರ ಗಾತ್ರ

ನರಗುಂದ: ಜುಲೈ 21ರಂದು ನಡೆಯಲಿರುವ ರೈತ ಹುತಾತ್ಮ ದಿನಾಚರಣೆಯನ್ನು ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಒಕ್ಕಟ್ಟಿನಿಂದ, ಅರ್ಥಪೂರ್ಣವಾಗಿ ಆಚರಿಸುವಂತೆ ತಹಶೀಲ್ದಾರ್ ಶ್ರೀಶೈಲ ತಳವಾರ ಸಲಹೆ ನೀಡಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಈಚೆಗೆ ನಡೆದ ಹುತಾತ್ಮ ರೈತ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ರಾಜ್ಯದೆಲ್ಲೆಡೆಯಿಂದ ನೂರಾರು ರೈತರು, ವಿವಿಧ ಸಂಘಟನೆಗಳ ಸದಸ್ಯರು, ಜನಪ್ರತಿನಿಧಿಗಳು, ರಾಜಕಾರಣಿಗಳು ಸೇರಿದಂತೆ ಅನೇಕರು ಹೆಚ್ಚಿನ ಜನರು ಪಾಲ್ಗೊಳ್ಳಬೇಕು ಎಂದರು.

ಪಟ್ಟಣ ಹಾಗೂ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ದಿನಾಚರಣೆ ನಡೆಯುವುದರಿಂದ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡು ಸೂಕ್ತ ಬಂದೋಬಸ್ತ್ ಒದಗಿಸಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಆಗ್ರಹ: ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಸಾಬಳೆ ರೈತರು, ಕನ್ನಡಪರ ಸಂಘಟನೆಗಳ ಮುಖಂಡರು ಮಾತನಾಡಿ, ಪಟ್ಟಣದಲ್ಲಿ 1980ರಲ್ಲಿ ನಿರ್ಮಿಸಿರುವ ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲು ಜೀರ್ಣೋದ್ಧಾರಕ್ಕೆ ಯಾರೂ ದಿಕ್ಕಿಲ್ಲದಂತಾಗಿದೆ. ಹುತಾತ್ಮ ರೈತನ ಸ್ಮರಣಾರ್ಥ ಸುಂದರವಾದ ಸ್ಮಾರಕ ಭವನ ನಿರ್ಮಿಸಲು ಸರ್ಕಾರ ಮುಂದಾಗಬೇಕು. ಇದಕ್ಕೆ
ನಿವೇಶನ ಒದಗಿಸುವುದರ ಜತೆಗೆ ಸರ್ಕಾರದಿಂದ ಅನುದಾನ ನೀಡಬೇಕೆಂದು ಒತ್ತಾಯಿಸಿದರು.

ಈಗಾಗಲೇ ಸಾಕಷ್ಟು ಬಾರಿ ತಾಲ್ಲೂಕು, ಜಿಲ್ಲಾಡಳಿತದ ಮೂಲಕ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಲಿಖಿತ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಸಾಬಳೆ ಅಸಮಾಧಾನ ವ್ಯಕ್ತಪಡಿಸಿದರು.

ತಹಸೀಲ್ದಾರ್‌ ಶ್ರೀಶೈಲ ತಳವಾರ ಪ್ರತಿಕ್ರಿಯಿಸಿ, ಸ್ಮಾರಕ ಭವನ ನಿರ್ಮಿಸಲು ಈಗಾಗಲೇ ಜಾಗ ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಸೂಕ್ತ ನಿವೇಶನ ದೊರೆತ ನಂತರ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ನಬಿಸಾಬ ಕಿಲ್ಲೇದಾರ. ರೈತಸೇನಾ ಕರ್ನಾಟಕ ಸಂಘಟನೆ ಸದಸ್ಯ ವೀರಬಸಪ್ಪ ಹೂಗಾರ, ಚನ್ನು ನಂದಿ, ಎಸ್.ಬಿ. ಜೋಗಣ್ಣವರ, ಕಳಸಾ ಬಂಡೂರಿ ಕೇಂದ್ರ ಯುವ ಹೋರಾಟ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ, ವಿವಿಧ ಸಂಘಟನೆಗಳ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT