ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಣೆಬೆನ್ನೂರು | ತೆಲಂಗಾಣ ಸೋನಾ: ಕಡಿಮೆ ಸಕ್ಕರೆ ಅಂಶವುಳ್ಳ ಹೊಸ ಭತ್ತದ ತಳಿ

ಆರ್.ಎನ್.ಆರ್- 15048(ತೆಲಂಗಾಣ ಸೋನಾ) ತಳಿಯ ಕ್ಷೇತ್ರೋತ್ಸವ
Published : 25 ನವೆಂಬರ್ 2024, 15:15 IST
Last Updated : 25 ನವೆಂಬರ್ 2024, 15:15 IST
ಫಾಲೋ ಮಾಡಿ
Comments
ಬಿತ್ತನೆ ಬೀಜೋಪಚಾರ
ಸಸಿ ಮಡಿ ತಯಾರಿಯ ಮುಂಚಿತವಾಗಿ ಬಿತ್ತನೆ ಬೀಜವನ್ನು 2 ಗ್ರಾಂ ಕಾರ್ಬನ್‌ಡೈಜಿಮ್ 50 ಡಬ್ಲೂ.ಪಿ. ಮತ್ತು 0.1 ಗ್ರಾಂ ಸ್ಟ್ರೆಪ್ಟೋಸೈಕ್ಲಿನ್ ಮತ್ತು 0.1 ಗ್ರಾಂ ಮೈಲುತುತ್ತೆ ಮತ್ತು 0.12 ಗ್ರಾಂ ತಾಮ್ರದ ಆಕ್ಸಿಕ್ಲೋರೈಡ್ 50 ಡಬ್ಲೂ.ಪಿ. ಒಂದು ಲೀಟರ್ ನೀರಿನಲ್ಲಿ ಕರಗಿಸಿದ ದ್ರಾವಣದಲ್ಲಿ 20 ನಿಮಿಷಗಳ ಕಾಲ ನೆನೆಸಿ ನಂತರ ಸಸಿ ಮಡಿಗೆ ಚೆಲ್ಲಬೇಕು. ಸಸಿಗಳ ವಯಸ್ಸು 21 ರಿಂದ 25 ದಿನ ಆದಾಗ ನಾಟಿ ಮಾಡಬೇಕು. ಕಳೆಗಳ ನಿಯಂತ್ರಣಕ್ಕಾಗಿ ಭತ್ತದ ಗದ್ದೆಗಳಲ್ಲಿ ಹುಲ್ಲು ಜಾತಿ ಕಳೆಗಳು ಕಡಿಮೆ ಇದು ಹೆಚ್ಚು ಅಗಲ ಎಲೆ ಕಸಗಳಿಂದ ಕೂಡಿದ್ದರೆ 2-4 ಡಿ ಸೋಡಿಯಂ ಉಪ್ಪು 80 ಡಬ್ಲೂ.ಪಿ. (ಪ್ರತಿ ಎಕರೆಗೆ 1.0 ಕಿಗ್ರಾಂ) 200 ಲೀ. ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಿ ನಿಯಂತ್ರಿಸಬಹುದು. ಭತ್ತದ ಗದ್ದೆಗಳ ಸಮೀಪ ಹತ್ತಿ ಬೆಳೆ ಇರುವಲ್ಲಿ ಈ ಕಳೆನಾಶಕವನ್ನು ಉಪಯೋಗಿಸಬಾರದು ಎಂದು ಹಿರಿಯ ವಿಜ್ಞಾನಿ ಡಾ.ಗುರುಪ್ರಸಾದ ಜಿ.ಎಸ್‌. ತಿಳಿಸಿದರು. ಸಸಿ ನಾಟಿ ಮಾಡುವ 6 ದಿನಗಳ ಮುಂಚೆ ಪ್ರತಿ 100 ಚದರ ಮೀಟರ್ ಕ್ಷೇತ್ರಕ್ಕೆ 0.3 -0.6 ಕಿಗ್ರಾಂ ಸಾರಜನಕವನ್ನೊದಗಿಸುವ ರಾಸಾಯನಿಕ ಗೊಬ್ಬರಗಳನ್ನು ಮೇಲ್ಗೊಬ್ಬರವಾಗಿ ಕೊಡಬೇಕು. ಬಿತ್ತನೆಯಾದ  20-25 ದಿನಗಳಿಗೆ ಸಸಿಗಳು ನಾಟಿಗೆ ಸಿದ್ಧವಾಗುತ್ತವೆ. ಸಸಿಗಳನ್ನು ನಾಟಿ ಮಾಡಿವಾಗ ಲಘುಪೋಷಕಾಂಶಗಳ ಶೇ.1 ರ ದ್ರಾವಣದಲ್ಲಿ ಅದ್ದಿ ನಾಟಿ ಮಾಡಬೇಕು. ನಾಟಿ ಮಾಡಿದ 20 ದಿನಗಳ ಅವಧಿಯಲ್ಲಿ 20:20:20 ಗೊಬ್ಬರವನ್ನು ನೀಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT