ಗದಗ: ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೆ ಆಗ್ರಹಿಸಿ ಹಾಗೂ ಪೌರಕಾರ್ಮಿಕರಿಗೆ ಎರಡನೇ ಹಂತದ ನೇಮಕಾತಿಗೆ ಒತ್ತಾಯಿಸಿ ಗದಗ ಜಿಲ್ಲಾ ಹೊರಗುತ್ತಿಗೆ ನೌಕರರ ಸಂಘದ ನೌಕರರು ಶುಕ್ರವಾರ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದರು.

ಗದಗ ಜಿಲ್ಲಾ ಘಟಕದ ಅಧ್ಯಕ್ಷ ಶಿವಪ್ಪ ಜಂಬಲದಿನ್ನಿ ಮಾತನಾಡಿ, ‘ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನಕ್ಕೆ ಒಳಪಡಿಸುವಂತೆ ಹಾಗೂ ಪೌರಕಾರ್ಮಿಕರ ಎರಡನೇ ಹಂತದ ನೇಮಕಾತಿಗೆ ಒತ್ತಾಯಿಸಿ ಮೇ 19ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಜುಲೈಗೂ ಮುನ್ನವೇ ಬೇಡಿಕೆ ಕುರಿತು ಸಕಾರಾತ್ಮಕ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದ ಮುಖ್ಯಮಂತ್ರಿಗಳು ಈವರೆಗೆ ಕ್ರಮವಹಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ರಾಜ್ಯದಾದ್ಯಂತ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಎಲ್ಲ ಬಗೆಯ ಸೇವೆಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ’ಎಂದುಹೇಳಿದರು.

‘ರಾಜ್ಯದ ಎಲ್ಲ 312 ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಗರಗಳ ಸ್ವಚ್ಛತೆ, ಕುಡಿಯುವ ನೀರಿನ ಸಮರ್ಪಕ ನಿರ್ವಹಣೆಯಲ್ಲಿ 10 ಸಾವಿರಕ್ಕೂ ಹೆಚ್ಚು ಗುತ್ತಿಗೆ ನೌಕರರು ತೊಡಗಿಸಿಕೊಂಡಿದ್ದಾರೆ. ಕಸ ಸಾಗಿಸುವ ವಾಹನ ಚಾಲಕರು ಕಸ ನಿರ್ವಹಣೆಯ ಸಹಾಯಕರು, ವಾಟರ್‌ಮನ್‌ಗಳು, ಒಳಚರಂಡಿ ಕಾರ್ಮಿಕರು, ಡೇಟಾ ಅಪರೇಟರ್, ಸ್ಮಶಾನ ಕಾವಲುಗಾರರು ಸೇರಿದಂತೆ ನಾನಾ ವಿಭಾಗಗಳಲ್ಲಿ 30 ವರ್ಷಗಳಿಂದ ಪೌರಕಾರ್ಮಿಕರೊಟ್ಟಿಗೆ ದುಡಿಯುತ್ತಾ ಬಂದಿದ್ದಾರೆ. ನಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಐದು ವರ್ಷಗಳಿಂದ ಹಂತ ಹಂತವಾಗಿ ಹೋರಾಟ ನಡೆಸಿಕೊಂಡು ಬರಲಾಗಿದ್ದು ಈಗ ನಿರ್ಣಾಯಕ ಘಟ್ಟ ತಲುಪಿದೆ’ ಎಂದು ಹೇಳಿದರು.

‘ಧರಣಿಯಿಂದಾಗಿ ನಾಗರಿಕರಿಗೆ ಆಗುವ ಅನನುಕೂಲಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಿದೆ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುವ ಕಾರ್ಮಿಕರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸಬೇಕು. ಭವಿಷ್ಯದಲ್ಲಿ ಈ ನೌಕರರನ್ನು ಕಾಯಂಗೊಳಿಸಲು ಅಗತ್ಯ ಕ್ರಮವಹಿಸಬೇಕು’ ಎಂದು ಹೇಳಿದರು.

ರಮೇಶ ಬಾರಕೇರ, ಮಹೇಶ ಬಳ್ಳಾರಿ, ಮುನಿಯಪ್ಪ ಬಳ್ಳಾರಿ, ಬುಡ್ಡಾಸಾಬ ಅರಳಿಗಡದ, ನಾಗರಾಜ ಜಿನ್ನಮಟ್ಟಿ, ಮಲ್ಲಿಕಾರ್ಜುನ ನಾವಳ್ಳಿ, ಎ. ವಿಜಯಕುಮಾರ, ಚಾಂದಸಾಬ ಶಿಂದನೂರ, ಶ್ರೀಪಾದ ಹೊಸಳ್ಳಿ, ಬಸವರಾಜ ಮುಂಡರಗಿ, ಶಿವಬಸಪ್ಪ ಹರ್ಲಾಪೂರ, ಹೊನಪ್ಪ ಸಾಕಿ, ಬಸವರಾಜ ದಾನಶೂರ, ಮಲ್ಲಿಕ ಸಂಗಾಪೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.