ಸಂತೇಮರಹಳ್ಳಿ: ಇಲ್ಲಿನ ಕೃಷಿ ಉತ್ಪನ್ನ ಉಪ ಮಾರುಕಟ್ಟೆ ಅಭಿವೃದ್ಧಿಗೆ ₹10 ಕೋಟಿ ಬಿಡುಗಡೆಗೊಳಿಸುವುದಾಗಿ ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ಇಲ್ಲಿನ ಕೃಷಿ ಉತ್ಪನ್ನ ಉಪ ಮಾರುಕಟ್ಟೆಗೆ ಭಾನುವಾರ ಭೇಟಿ ನೀಡಿ ಅವರು ಮಾತನಾಡಿದರು.
ರೈತರ ಕೃಷಿ ಉತ್ಪನ್ನಗಳನ್ನು ದಾಸ್ತಾನು ಇರಿಸಲು ಇಲ್ಲಿ ತೊಂದರೆಯಾಗಿದೆ. ಮೂಲ ಸೌಕರ್ಯ ಸಮಸ್ಯೆ ಇದೆ ಎಂದು ಸ್ಥಳೀಯ ಶಾಸಕ ಎ.ಆರ್.ಕೃಷ್ಣಮೂರ್ತಿ ಸದನದಲ್ಲಿ ಗಮನಕ್ಕೆ ತಂದಿದ್ದರಿಂದ ಪರಿಶೀಲನೆ ನಡೆಸಲಾಗಿದೆ. ರಸ್ತೆ ಅಭಿವೃದ್ಧಿ, ಕುಡಿಯುವ ನೀರು, ಅಂಗಡಿ ಮಳಿಗೆಗಳು, ವಿದ್ಯುತ್ ಹಾಗೂ ಗೋದಾಮುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಮಾರುಕಟ್ಟೆ ಪ್ರಾಂಗಣದ ಅಭಿವೃದ್ಧಿಗಾಗಿ ₹10 ಕೋಟಿ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಎಂಜಿನಿಯರ್ಗಳು ಕ್ರಿಯಾ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.

ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಈ ಭಾಗದಲ್ಲಿ ಎಳನೀರು ಮಾರುಕಟ್ಟೆ ಇಲ್ಲದೆ ಜಿಲ್ಲೆಯ ರೈತರು ಬೇರೆ ಜಿಲ್ಲೆಗೆ ಹೋಗಿ ಎಳನೀರು ಮಾರಾಟ ಮಾಡಬೇಕಾಗಿದೆ. ಎಳನೀರು ಮಾರುಕಟ್ಟೆ ಆರಂಭಿಸಬೇಕು ಎಂದು ಸಚಿವರನ್ನು ಒತ್ತಾಯಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸೋಮೇಶ್, ಉಪಾಧ್ಯಕ್ಷ ರಾಮಚಂದ್ರ, ಗ್ಯಾರೆಂಟಿ ಯೋಜನೆ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು, ಚಾಮೂಲ್ ನಿರ್ದೇಶಕ ಕಮರವಾಡಿ ರೇವಣ್ಣ, ಪ್ರದೀಪ್, ಪಸಿ, ರಾಜು ಶಂಕರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.