ಡಂಬಳ: ಸರ್ಕಾರ ಜಾರಿಗೆ ತಂದಿರುವ ಜಿಲ್ಲಾಡಳಿತದ ನಡೆ ಹಳ್ಳಿಯಕಡೆ ಯೋಜನೆಯ ಉದ್ದೇಶ ಸಾರ್ಥಕವಾಗಬೇಕಾದರೆ ಎಲ್ಲಾ ಇಲಾಖೆಗಳ ಪಾತ್ರ ಮಹತ್ವದ್ದಾಗಿದೆ. ಸಮಸ್ಯೆ ಪರಿಹಾರಕ್ಕಾಗಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ ಎಂದು ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ ಹೇಳಿದರು.

ಮೇವುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರದೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಜಿಲ್ಲಾಡಳಿತದ ನಡೆ ಹಳ್ಳಿಯಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಪೌಷ್ಟಿಕ ಮಕ್ಕಳ ಕುರಿತು ಮಾಹಿತಿ ಪಡೆದರು. ಅಂಗನವಾಡಿ ಫಲಾನುಭವಿಗಳಿಗೆ ವಿತರಿಸಲಾಗುವ ಪೌಷ್ಟಿಕ ಆಹಾರ ಬಗ್ಗೆ ಪರಿಶೀಲಿಸಿ ಮಾಹಿತಿ ಪಡೆದರು. ಎಸ್ಸಿ ಕಾಲೂನಿಗೆ ಭೇಟಿ ನೀಡಿ ಆಶ್ರಯ ಯೋಜನೆಯಡಿ ಸೂರು ರಹಿತರಿಗೆ ಮನೆ ಒದಗಿಸಲು ಆದ್ಯತೆ ನೀಡುವಂತೆ ಪಿಡಿಒಗೆ ತಿಳಿಸಿದರು.

ಕಂದಾಯ ನಿರೀಕ್ಷಕ ಎಂ.ಎ. ನಧಾಪ ಮಾತನಾಡಿ, 130 ಅರ್ಜಿಗಳು ಬಂದಿವೆ ಎಂದು ಮಾಹಿತಿ ನೀಡಿದರು.

ಮೇವುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಜ್ಯೋತಿ ರವಿ ತಾರಿಕೊಪ್ಪ, ಉಪಾಧ್ಯಕ್ಷೆ ದುರಗಮ್ಮ ತಳಗೇರಿ, ಇಒ ಎಸ್.ಎಸ್.ಕಲ್ಮನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.