ಗದಗ: ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಅವರ ಪುಣ್ಯಸ್ಮರಣೆ ನ.11ರಂದು ಮತ್ತು ನೂತನ ಪೀಠಾಧಿಪತಿ ತೋಂಟದ ಸಿದ್ಧರಾಮ ಸ್ವಾಮೀಜಿ ಅವರ ಗುರುವಂದನಾ ಕಾರ್ಯಕ್ರಮ ನ.12 ರಂದು ಮಠದ ಆವರಣದಲ್ಲಿ ನಡೆಯಲಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಠದ ಆಡಳಿತ ಮಂಡಳಿ ಸದಸ್ಯರು,‘ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ತುಮಕೂರಿನ ಸಿದ್ಧಲಿಂಗ ಸ್ವಾಮೀಜಿ, ಕಾಗಿನೆಲೆಯ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ’ಎಂದರು.

‘ಸಿದ್ಧಲಿಂಗ ಸ್ವಾಮೀಜಿ ಅವರ ಕುರಿತಾದ ‘ಕ್ರಾಂತಿ ಕಾರುಣ್ಯ’ಗ್ರಂಥ, ಲಿಂಗಾಯತ ದರ್ಶನ ಹಾಗೂ ಲಿಂಗಾಯತ ಕ್ರಾಂತಿ ವಿಶೇಷ ಸಂಚಿಕೆಗಳನ್ನು ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯ ಅವರು ಬಿಡುಗಡೆ ಮಾಡುವರು. ಅಂದು ಸಂಜೆ 4 ಗಂಟೆಗೆ ನಿಡಸೋಸಿ ಸಿದ್ಧಸಂಸ್ಥಾನ ಮಠದ ಶ್ರೀಗಳ ಸಾನ್ನಿಧ್ಯದಲ್ಲಿ ಸಿದ್ಧಲಿಂಗ ಶ್ರೀಗಳಿಗೆ ನುಡಿ ನಮನ ಕಾರ್ಯಕ್ರಮ ನಡೆಯಲಿದೆ’ ಎಂದರು.

ನ.12ರಂದು ಬೆಳಿಗ್ಗೆ 10ಗಂಟೆಗೆ,ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಶಿವಮೊಗ್ಗದ ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ, ನೂತನ ಶ್ರೀಗಳ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ‘ಸಿದ್ಧರಾಮ ಸ್ವಾಮೀಜಿ ಅವರು ಕನ್ನಡಕ್ಕೆ ಅನುವಾದಿಸಿರುವ ಭಾರತೀಯ ತತ್ವಶಾಸ್ತ್ರದ ವಿಮರ್ಶಾತ್ಮಕ ಅಧ್ಯಯನ ಗ್ರಂಥವು ಲೋಕಾರ್ಪಣೆಗೊಳ್ಳಲಿದೆ’ಎಂದು ಮಠದ ಆಡಳಿತಾಧಿಕಾರಿ ಎಸ್.ಎಸ್ ಪಟ್ಟಣಶೆಟ್ಟಿ, ಪ್ರಾಚಾರ್ಯ ಎಸ್.ಎಸ್ ಹರ್ಲಾಪೂರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.