ಗದಗ: ಸಫಾಯಿ ಕರ್ಮಚಾರಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರ ರೂಪಿಸಿರುವ ವಿವಿಧ ಯೋಜನೆಗಳನ್ನು ಅವರಿಗೆ ದೊರಕಿಸಿಕೊಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ‘ಪಾಲಿಕೆ, ಸ್ಥಳೀಯ ಸಂಸ್ಥೆ ಹಾಗೂ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ತಪ್ಪದೇ ಕೋವಿಡ್–19 ಮುಂಜಾಗ್ರತಾ ಲಸಿಕೆ ಹಾಕಿಸಬೇಕು. ಮಾಸ್ಟರ್ ಹೆಲ್ತ್ ಚೆಕಪ್ ಮಾಡಿಸಬೇಕು. ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಲು ಬಳಸುವ ಮಾಸ್ಕ್, ಗಮ್ ಬೂಟ್, ಪೊರಕೆ ಮುಂತಾದ ಪರಿಕರಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳ ಕುರಿತ ಸಮೀಕ್ಷೆಯನ್ನು ಸರಿಯಾಗಿ ಮಾಡಬೇಕು. ಪೌರಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿವೇತನ ಸೌಲಭ್ಯವನ್ನು ಸಮರ್ಪಕವಾಗಿ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುಶೀಲಾ ಬಿ. ಮಾತನಾಡಿ, ‘ನಗರಸಭೆ, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ರಸ್ತೆ, ಚರಂಡಿಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು’ ಎಂದರು.

ಸಭೆಯಲ್ಲಿ ಪೌರಕಾರ್ಮಿಕರಿಗೆ ಕಾರ್ಯಾಗಾರ ಏರ್ಪಡಿಸಿ ತರಬೇತಿ ಹಾಗೂ ಗದಗ ನಗರದಲ್ಲಿ ನಿವೇಶನ ಹಂಚಿಕೆ ಕುರಿತು ಚರ್ಚಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಬಾಸಾಬ ನೇಮಗೌಡ, ಉಪವಿಭಾಗಾಧಿಕಾರಿ ಅನ್ನಪೂರ್ಣ ಎಂ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಸ್ಥಳೀಯ ಸಂಸ್ಥೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.