ಹಾಸನ: ಎರಡನೇ ಬಾರಿಗೆ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಲೋಕಸಭಾ ಚುನಾವಣೆ ವೇಳೆ ವರ್ಗಾವಣೆಗೊಂಡಿದ್ದ ಅವರು ನಿರ್ಗಮಿತ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರಿಂದ ಅಧಿಕಾರ ವಹಿಸಿಕೊಂಡರು.

ಎರಡು ತಿಂಗಳು ಡಿಸಿಯಾಗಿದ್ದ ಪ್ರಿಯಾಂಕಾ ಅವರಿಗೆ ಜಿಲ್ಲಾಡಳಿತದ ವತಿಯಿಂದ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ಈ ವೇಳೆ ಮಾತನಾಡಿದ ಪ್ರಿಯಾಂಕಾ, ‘ಹಾಸನ ಜಿಲ್ಲಾಧಿಕಾರಿಯಾಗಿ ಮಾಡಿದ ಸೇವೆ ತೃಪ್ತಿ ತಂದಿದೆ ಹಾಗೂ ಹೆಚ್ಚಿನ ಅನುಭವ ನೀಡಿದೆ. ಚುನಾವಣೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮುಕ್ತಾಯಗೊಂಡಿದೆ. ಹಾಸನದಲ್ಲಿ ಸಮರ್ಥ ಅಧಿಕಾರಿಗಳ ದೊಡ್ಡ ಪಡೆ ಇದೆ. ಹೇಳಿದ ತಕ್ಷಣ ಅರ್ಥ ಮಾಡಿಕೊಂಡು ಕೆಲಸ ಮಾಡುವವರು ಹೆಚ್ಚಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ನಿರೀಕ್ಷಿಸಬಹುದು’ ಎಂದು ನುಡಿದರು.

ಅಕ್ರಂ ಪಾಷ ಮಾತನಾಡಿ, ‘ಯಶಸ್ವಿ ಚುನಾವಣೆ ನಡೆಸುವಲ್ಲಿ ಜಿಲ್ಲಾಧಿಕಾರಿ ಜೊತೆಗೆ ಸಹ ಅಧಿಕಾರಿ, ಸಿಬ್ಬಂದಿ ಜವಾಬ್ದಾರಿಯೂ ಹೆಚ್ಚು. ಪ್ರಿಯಾಂಕ ಯುವ ಅಧಿಕಾರಿಯಾಗಿದ್ದು, ಮುಂದೆ ರಾಜ್ಯ ಮಟ್ಟದಲ್ಲಿ ವಿವಿಧ ಹುದ್ದೆ ಅಲಂಕರಿಸಲಿದ್ದು, ಆ ವೇಳೆ ಜಿಲ್ಲೆಗೆ ವಿಶೇಷ ಆದ್ಯತೆ ನೀಡಬೇಕು’ ಎಂದು ಕೋರಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್. ವಿಜಯ ಪ್ರಕಾಶ್ ಮಾತನಾಡಿ, ‘ಜಿಲ್ಲೆಯಲ್ಲಿ ಗೊಂದಲ ರಹಿತವಾಗಿ ಚುನಾವಣೆ ಸಂಘಟಿಸುವಲ್ಲಿ ಹಾಗೂ ಮತದಾರರ ಜಾಗೃತಿ ಚಟುವಟಿಕೆಗಳನ್ನು ನಡೆಸುವಲ್ಲಿ ಇಬ್ಬರು ಅಧಿಕಾರಿಗಳು ಶಕ್ತಿ ಮೀರಿ ಶ್ರಮಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.

ಚುನಾವಣೆ ಸಂದರ್ಭ ವರ್ಗಾವಣೆ ಹೊಂದಿ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತರಾಗಿದ್ದ ಅ್ರಕಂ ಪಾಷ ಅವರು ಜಿಲ್ಲೆಯ ಉದ್ಯೋಗ ಖಾತ್ರಿ ಯೋಜನೆಯಡಿ ₹51 ಕೋಟಿ ಬಾಕಿ ಅನುದಾನ ಬಿಡುಗಡೆ ಮಾಡಿಕೊಟ್ಟು ಸಹಕರಿಸಿದ್ದಾರೆ ಎಂದು ಸ್ಮರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಉಪವಿಭಾಗಾಧಿಕಾರಿ ಎಚ್.ಎನ್. ನಾಗರಾಜ್ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತಾ ಅವರು ಜಿಲ್ಲಾಧಿಕಾರಿಯ ಸೇವಾದಕ್ಷತೆ, ಚುನಾವಣೆ ಸಂದರ್ಭದಲ್ಲಿ ವಹಿಸಿದ ಮುಂದಾಳತ್ವ, ಸರಳತೆಗಳ ಬಗ್ಗೆ ವಿವರಿಸಿದರು.

ಮುಜರಾಯಿ ತಹಶೀಲ್ದಾರ್ ಶಾರದಾಂಬ ಸ್ವಾಗತಿಸಿದರು. ಸಕಲೇಶಪುರ ಉಪವಿಭಾಗಾಧಿಕಾರಿ ಕವಿತಾ ರಾಜಾರಾಮ್, ನಗರಸಭೆ ಆಯುಕ್ತೆ ರೂಪಶೆಟ್ಟಿ ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.