ಆಲೂರು: ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳ್ಳಿಕೊಪ್ಪಲು ಗ್ರಾಮದಿಂದ ದೇವರಾಜನಹಳ್ಳಿ ಮಾರ್ಗವಾಗಿ ಸಿದ್ದಾಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಶಾಲಾ ಮಕ್ಕಳು, ಸಾರ್ವಜನಿಕರು, ವಾಹನಗಳು ಸಂಚರಿಸಲು ಪರದಾಡುವಂತಾಗಿದೆ.

ಗಂಜಿಗೆರೆ, ಗರಿಗಟ್ಟ, ಕ್ಯಾತನಳ್ಳಿ ಕಾಲೊನಿ, ತಟ್ಟೆಕೆರೆ, ಬಸವನಹಳ್ಳಿ, ಕಾಳಶೆಟ್ಟಿ ಬೀಡು ಸೇರಿದಂತೆ ಸುಮಾರು 18 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಪ್ರತಿದಿನ ನೂರಾರು ವಾಹನಗಳು, ಸಾವಿರಾರು ಜನರು ಓಡಾಡುತ್ತಾರೆ. ಈ ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಹದಗೆಟ್ಟಿರುವ ರಸ್ತೆಯಲ್ಲಿ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದ್ವಿಚಕ್ರ ವಾಹನ ಸವಾರರು ಹೊಂಡ, ಗುಂಡಿಗಳನ್ನು ತಪ್ಪಿಸಿಕೊಂಡು ಮುಂದೆ ಹೋಗಲು ಹರಸಾಹಸ ಪಡಬೇಕು. ಸುಮಾರು ಐದಾರು ಕಿ.ಮೀ. ಇರುವ ಈ ಮಣ್ಣು ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿದ್ದು, ಮಳೆ ನೀರು ನಿಂತಿದೆ. ಇಂತಹ ಪರಿಸ್ಥಿತಿಯಲ್ಲಿ ಜನತೆ ಮತ್ತು ವಾಹನಗಳು ಸಂಚರಿಸುವ ಅನಿವಾರ್ಯತೆ ಉಂಟಾಗಿದೆ. ಜನಸಾಮಾನ್ಯರು ಓಡಾಡುವ ಸಂದರ್ಭ, ಪಕ್ಕದಲ್ಲಿ ವಾಹನಗಳು ಹಾಯ್ದು ಹೋದರೆ ಕೆಸರು ನೀರು ಮೈಮೇಲೆ ಹಾರುತ್ತಿರುವುದರಿಂದ ಕಿರಿಕಿರಿ ಅನುಭವಿಸುವಂತಾಗಿದೆ ಎಂದು ಜನರು ದೂರುತ್ತಿದ್ದಾರೆ.

‘ಕಳ್ಳಿಕೊಪ್ಪಲು ಸಿದ್ದಾಪುರ ಮಾರ್ಗ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಜನಸಾಮಾನ್ಯರು ಓಡಾಡಲು ದುಸ್ತರವಾಗಿದೆ. ಹಲವು ವರ್ಷಗಳಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಕಾಫಿ ತೋಟಗಳು ಇರುವುದರಿಂದ ಕಾಡಾನೆಗಳು ರಸ್ತೆಗೆ ಬಂದಿದ್ದು ಗೊತ್ತಾಗುವುದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು, ಶಾಸಕ ಸಿಮೆಂಟ್ ಮಂಜು ಗಮನಹರಿಸಿ ರಸ್ತೆ ದುರಸ್ತಿ ಮಾಡಿಸಿಕೊಡಬೇಕು’ ಎಂದು ಕಳ್ಳಿಕೊಪ್ಪಲು ಗ್ರಾಮದ ವೆಂಕಟೇಗೌಡ ಒತ್ತಾಯಿಸಿದರು.

ಕಳ್ಳಿಕೊಪ್ಪಲು ಗ್ರಾಮದಿಂದ ಸಿದ್ದಾಪುರಕ್ಕೆ ಹೋಗುವ ರಸ್ತೆ ಗುಂಡಿ ಬಿದ್ದಿರುವ ಬಗ್ಗೆ ಗಮನಿಸಿದ್ದು ತಕ್ಷಣ ಪರಿಶೀಲನೆ ಮಾಡಿ ಕಾಮಗಾರಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು.
ರಮೇಶ್ ಪಂಚಾಯತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕ

ಕಳ್ಳಿಕೊಪ್ಪಲು– ಸಿದ್ದಾಪುರ ರಸ್ತೆ ಹದಗೆಟ್ಟಿರುವುದು ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲಿಸಿ ಕ್ರಮ ವಹಿಸಲು ಸೂಚಿಸುತ್ತೇನೆ.
ಸಿಮೆಂಟ್ ಮಂಜು ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.