ಹಾಸನ: ನಕಲಿ ಆಧಾರ್ ಕಾರ್ಡ್ ಇಟ್ಟುಕೊಂಡು ನಗರದಲ್ಲಿ ವಾಸಿಸುತ್ತಿದ್ದ ಮೂವರು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ್ದಾರೆ. ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹಕ್ ಬಂಧಿತರು.

ನಗರದ 80 ಅಡಿ ರಸ್ತೆಯ ಗದ್ದೆಹಳ್ಳದಲ್ಲಿ ಜುಬೇರ್ ಎಂಬುವವರ ಮನೆಯಲ್ಲಿ ಈ ಮೂವರು ವಾಸವಾಗಿದ್ದರು. ಮೂವರು ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿದ್ದ ಮೂವರು, ಬೆಂಗಳೂರಿನ ಮೂಲಕ ನಗರಕ್ಕೆ ಬಂದಿದ್ದರು. ನಗರದಲ್ಲಿ ಗಾರೆ ಕೆಲಸ ಸೇರಿದಂತೆ ಹಲವು ಕೆಲಸಗಳನ್ನು ಮಾಡುತ್ತಿದ್ದು, ಪಶ್ಚಿಮ ಬಂಗಾಳದವರೆಂದೇ ಹೇಳಿಕೊಂಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಖಚಿತ ಮಾಹಿತಿಯ ಮೇಲೆ ದಾಳಿ ನಡೆಸಿರುವ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು, ಮೂವರನ್ನು ತೀವ್ರ ವಿಚಾರಣೆಗೆ ಒಳಪಡಿದ್ದಾರೆ. ಇಲ್ಲಿನ ಪೆನ್ಷನ್ ಮೊಹಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.