ಬೇಲೂರು: ಕಲೆ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕಲಾಭವನ ನಿರ್ಮಿಸಲಾಗುವುದು ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.

ಇಲ್ಲಿನ ಚನ್ನಕೇಶವಸ್ವಾಮಿ ದೇಗುಲ ದಾಸೋಹ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಲಾಗಿದ್ದ, ಎಸ್ಸೆಸ್ಸೆಲ್ಸಿ ಕನ್ನಡ ವಿಷಯದಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಮತ್ತು ಸಾಹಿತಿ ಡಾ.ವಿಜಯದಬ್ಬೆ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸುವುದು ಉತ್ತಮ ಕಾರ್ಯದೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಸಂಸ್ಕಾರವನ್ನೂ ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕಬೇಕು ಎಂದರು.
ತಹಶೀಲ್ದಾರ್ ಎಂ.ಮಮತಾ ಮಾತನಾಡಿ, ‘ವಿಜಯದಬ್ಬೆಯವರು ಪ್ರಾಮಾಣಿಕವಾಗಿ, ಜಾತ್ಯತೀತವಾಗಿ, ಸ್ವಾಭಿಮಾನಿಯಾಗಿ ಬದುಕಿದ್ದವರು’ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಘಟಕದ ನಿರ್ದೇಶಕ ಎಚ್.ಎಂ.ದಯಾನಂದ್ ಮಾತನಾಡಿ, 4 ದಶಕಗಳಿದ ಕಾರ್ಯನಿರ್ವಹಿಸುತ್ತಿರುವ ಪರಿಷತ್ತಿಗೆ ಸಾಹಿತ್ಯ ಭವನ ಇಲ್ಲದಿರುವುದು ಶೋಚನೀಯ, ಶಾಸಕರು ಈ ಬಗ್ಗೆ ಗಮನಹರಿಸಬೇಕು ಎಂದರು.

ಪುರಸಭಾ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್, ಕ್ಷೇತ್ ರಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಲ್.ರಾಜೇಗೌಡ, ಕಾರ್ಯದರ್ಶಿ ಆರ್.ಎಸ್ ಮಹೇಶ್, ಬಿ.ಬಿ.ಶಿವರಾಜುಚನ್ನಕೇಶವ ದೇಗುಲ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ನಾರಾಯಣಸ್ವಾಮಿ, ಪ್ರಮುಖರಾದ ಮಾ.ನ.ಮಂಜೇಗೌಡ, ಮ.ಶಿವಮೂರ್ತಿ, ಕುಮಾರಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.