ಬೇಲೂರು: ‘ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ನೀಡುವ ಸವಲತ್ತುಗಳನ್ನು ಅರ್ಹರಿಗೆ ಮಾತ್ರ ನೀಡಬೇಕು ಎಂದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.

ಇಲ್ಲಿನ ಕೃಷಿ ಇಲಾಖೆಯ ಆವರಣದಲ್ಲಿ ಬುಧವಾರ ಫಲಾನುಭವಿಗಳಿಗೆ ಟಾರ್ಪಲ್ ವಿತರಿಸಿ ಅವರು ಮಾತನಾಡಿದರು.

‘ಸರ್ಕಾರ ರೈತರಿಗೆ ನೀಡುವ ಸವಲತ್ತುಗಳು ಅನರ್ಹರಿಗೆ ದೊರೆತರೆ ಅವರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಾರೆ. ಆದ್ದರಿಂದ ಪಾರದರ್ಶಕವಾಗಿ ಸವಲತ್ತುಗಳನ್ನು ವಿತರಿಸಿ ಅರ್ಹರಿಗೆ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ತಾಲ್ಲೂಕಿನಲ್ಲಿ 1,344 ರೈತರಿಗೆ ಟಾರ್ಪಲ್ ವಿತರಿಸಲಾಗುತ್ತಿದ್ದು, ಇಂದು 244 ರೈತರಿಗೆ ಸಾಂಕೇತಿಕವಾಗಿ ವಿತರಿಸಲಾಗುತ್ತಿದೆ, ಉಳಿದವರಿಗೆ ಅವರವರ ಗ್ರಾಮಗಳಿಗೆ ತೆರಳಿ ವಿತರಿಸಲು ಸೂಚಿಸಲಾಗಿದೆ’ ಎಂದರು.

‘ತಾಲ್ಲೂಕಿನ ಅಡಗೂರು ಪಂಚಾಯಿತಿಯ 150 ರೈತರಿಗೆ ತಲಾ ₹ 30 ಸಾವಿರವನ್ನು ಪಶುಸಹಾಯ ದಾನವನ್ನಾಗಿ ನೀಡಲಾಗಿದೆ’ ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ತೇಜಸ್ ಮಾತನಾಡಿ, ‘ಟಾರ್ಪಲ್ ಪಡೆಯಲು ಅರ್ಜಿ ಸಲ್ಲಿಸಿದ ರೈತರಿಗೆ ಜ್ಯೇಷ್ಠತೆಯ ಆಧಾರದಲ್ಲಿ ವಿತರಿಸಲಾಗುತ್ತಿದೆ. ಒಮ್ಮೆ ಟಾರ್ಪಲ್ ಪಡೆದವರು ಮೂರು ವರ್ಷಗಳ ತನಕ ಪಡೆಯುವಂತಿಲ್ಲ. ನಾವು ಟಾರ್ಪಲ್ ನೀಡಬೇಕಾದರೆ ಟಾರ್ಪಲ್ ಮೇಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೀಡಲಾಗುತ್ತಿದೆ’ ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ತಾಂತ್ರಿಕಾಧಿಕಾರಿ ಕಾವ್ಯಾ, ಬಿಜೆಪಿ ಮುಖಂಡ ಪರ್ವತಯ್ಯ ಹಾಗೂ ಫಲಾನುಭವಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.