ಹಾಸನ: ‘ಹಿಂದೂಗಳ ಮನೆಯ ಹಟ್ಟಿ ಹಾಗೂ ಅಂಗಳಕ್ಕೆ ಯಾರಾದರೂ ಜಿಹಾದಿಗಳು, ಮೀನಿನ ವ್ಯಾಪಾರಿಗಳು, ತರಕಾರಿ ವ್ಯಾಪಾರಿಗಳು ಬರುವಾಗ ಎಚ್ಚರಿಕೆಯಿಂದ ಇರಿ. ನಮ್ಮಲ್ಲಿರುವಂತಹ ಕೋವಿಗಳು ಹೊರಬರಲಿವೆ’ ಎಂದು ಬಜರಂಗ ದಳದ ರಾಜ್ಯ ಸಹ ಸಂಚಾಲಕ ರಘು ಎಚ್ಚರಿಕೆ ನೀಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ರಘು ಬಂಧನಕ್ಕೆ ಹುಡುಕಾಟ ಆರಂಭಿಸಿದ್ದಾರೆ.

ಎಮ್ಮೆಯನ್ನು ಗುಂಡಿಕ್ಕಿ ಕೊಂದ ಘಟನೆ ಖಂಡಿಸಿ ಶುಕ್ರವಾರ ಸಕಲೇಶಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ರಘು, ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದಾಗಿ ಹೇಳಿದೆ. ಆದರೆ, ಬಜರಂಗ ದಳದ ಕಾರ್ಯಕರ್ತರು ಗೋವುಗಳನ್ನು ರಕ್ಷಣೆ ಮಾಡಿಯೇ ಮಾಡುತ್ತಾರೆ’ ಎಂದು ಹೇಳಿದ್ದಾರೆ.

‘ರಘು ವಿರುದ್ಧ ಪ್ರಚೋದನಕಾರಿ ಭಾಷಣ ಹಾಗೂ ಧರ್ಮಗಳ ನಡುವೆ ದ್ವೇಷ ಬಿತ್ತುವ ಪ್ರಯತ್ನ ನಡೆಸಿದ ಕುರಿತು ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಡಿವೈಎಸ್ಪಿ ಎಚ್.ಎನ್. ಮಿಥುನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.