ಹಾಸನ: ಆನೆಯನ್ನು ಕೊಂದು ಹೂತು ಹಾಕಿದ್ದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ಚಲ್ ರೇವಣ್ಣ ಆರೋಪಿಗಳ ರಕ್ಷಣೆಗೆ ಒತ್ತಡ ಹೇರುತ್ತಿದ್ದಾರೆ ಎಂದು ಸಂಸದೆ ಮನೇಕಾ ಗಾಂಧಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಅಕ್ರಮವಾಗಿ ವಿದ್ಯುತ್ ಹರಿಸಿ ಆನೆಯನ್ನು ಕೊಂದು ಹೂತು ಹಾಕಲಾಗಿತ್ತು. ಬಳಿಕ ಸತ್ತ ಆನೆಯಿಂದ ದಂತ ಕತ್ತರಿಸಿ ಮಾರಾಟ ಮಾಡುವ ಪ್ರಯತ್ನದಲ್ಲಿದ್ದಾಗ ಆರೋಪಿಗಳು ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದರು.

ಹಾಸನ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ ಆನೆಯನ್ನ ಕೊಂದು ಹಾಕಲಾಗಿತ್ತು. ಬಳಿಕ ದಂತ ಮಾರಾಟ ಮಾಡುವ ವೇಳೆ ಮಾರ್ಚ್ 19 ರಂದು ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಆರೋಪಿಗಳು ಸಿಕ್ಕಿಬಿದ್ದಿದ್ದರು.

ಈ ಪ್ರಕರಣದಲ್ಲಿ ಅರಣ್ಯ ಅಧಿಕಾರಿಗಳು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಸ್ಥಳೀಯ ವಲಯ ಅರಣ್ಯ ಅಧಿಕಾರಿ ಭಾರಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಮನೇಕಾ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಪ್ರಕರಣದಲ್ಲಿಆರೋಪಿಗಳ ರಕ್ಷಣೆ ಮಾಡಲು ಹಾಸನ ಅರಣ್ಯ ಇಲಾಖೆ ಆರ್.ಎಫ್. ಓ ಪ್ರಯತ್ನ ಮಾಡಿದ್ದಾರೆ. ಪ್ರಕರಣ ವರ್ಗಾಯಿಸಲು ಪದೇ ಪದೇಕೇಸ್ ಹಾಕಿ ಅಚ್ಚುಕಟ್ಟು ಪ್ರದೇಶದ ಪೊಲೀಸರಿಗೆ ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳು ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರು ಎಂಬ ಕಾರಣಕ್ಕೆ ಅವರ ಪರವಾಗಿ ಸಂಸದರು ಒತ್ತಡ ಹೇರುತ್ತಿದ್ದಾರೆ. ಮುಖ್ಯಮಂತ್ರಿ ಮಧ್ಯಪ್ರವೇಶ ಮಾಡಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಜುಲೈ 18 ರಂದು ಬರೆದ ಪತ್ರದಲ್ಲಿ ಮನೇಕಾ ಗಾಂಧಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.