ಬೇಲೂರು: ತಾಲ್ಲೂಕಿನ ಬಿಕ್ಕೋಡು ಹೋಬಳಿ ಚೌಡನಹಳ್ಳಿಯ ರೈತ ಚಂದ್ರಯ್ಯ (48) ಕಳೆನಾಶಕ ಸೇವಿಸಿ ಮೃತಪಟ್ಟರು.

‘ಚಂದ್ರಯ್ಯ ಅವರು ಶುಂಠಿ ಬೆಳೆಯಲು ಇಬ್ಬೀಡು ಕೆನರಾ ಬ್ಯಾಂಕ್ನಲ್ಲಿ ಹಾಗೂ ವಿವಿಧ ಸಂಘ, ಸಂಸ್ಥೆಗಳಲ್ಲಿ ಸಾಲ ಮಾಡಿದ್ದರು. ಸರಿಯಾದ ಸಮಯಕ್ಕೆ ಮಳೆ ಬಾರದ ಕಾರಣ ಬೆಳೆ ಕೈಕೊಟ್ಟಿದ್ದು, ಏಪ್ರಿಲ್ 19 ರಂದು ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಹಾಸನದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಬುಧವಾರ ಆರೋಗ್ಯದಲ್ಲಿ ಏರುಪೇರಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.

ಚಂದ್ರಯ್ಯ ಅವರಿಗೆ ಪತ್ನಿ ವಸಂತ, ಪುತ್ರ ಲೋಕೇಶ್, ಪುತ್ರಿ ಹೇಮಾವತಿ ಇದ್ದಾರೆ.

ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.