ಹಾಸನ: ಹಾಸನಾಂಬಾ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವವನ್ನು ಅ. 28ರಿಂದ ನ. 6ರ ವರೆಗೆ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ಗುರು ವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

‘ರಾಜ್ಯ ಸರ್ಕಾರ ದಸರಾ ಆಚರಣೆ ಮಾರ್ಗಸೂಚಿ ಪ್ರಕಟಿಸಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣ ಹೆಚ್ಚುತ್ತಿ ರುವುದನ್ನು ಗಮನದಲ್ಲಿಟ್ಟು ಕೊಂಡು ಈ ಬಾರಿಯೂ ಸಹ ಹಾಸನಾಂಬ ನೇರ ದರ್ಶನಕ್ಕೆ ಸಾರ್ವ ಜನಿಕರಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ’ ಎಂದು ಗೋಪಾಲಯ್ಯ ತಿಳಿಸಿದರು.

‘ಕೋವಿಡ್ ಇರುವುದರಿಂದ ಭಕ್ತರು ಜಿಲ್ಲಾಡಳಿತಕ್ಕೆಸಹಕಾರ ನೀಡಬೇಕು. ಸಾರ್ವಜನಿಕರ ಆರೋಗ್ಯವೂ ಮುಖ್ಯ. ಒಂದು ವೇಳೆ ಎಲ್ಲರಿಗೂ ದರ್ಶನಕ್ಕೆ ಅವಕಾಶ ನೀಡಿ, ಏನಾದರೂ ಸಮಸ್ಯೆ ಉಂಟಾದರೆ ಜಿಲ್ಲಾಡಳಿತವನ್ನೇ ಹೊಣೆ ಮಾಡುವುದು ಬೇಡ. ಉತ್ಸವ ದಲ್ಲಿ ಯಾವುದೇ ಸಂಪ್ರದಾಯ ಗಳು, ಆಚರಣೆಗಳು ಮತ್ತು ವಿಜೃಂಭ ಣೆಗೆ ಕೊರತೆಯಾಗದಂತೆ ಕ್ರಮವಹಿಸಲಾಗು ವುದು’ ಎಂದು ಅವರು ತಿಳಿಸಿದರು.

‘ನಗರದಲ್ಲಿ ದೀಪಾಲಂಕಾರ ಹಾಗೂ ಪುಷ್ಪಾಲಂಕಾರ ವ್ಯವಸ್ಥೆ ಮಾಡಲಾಗುವುದು. ವಿಶೇಷ ಪೂಜೆ ಹೊರತುಪಡಿಸಿ ಧಾರ್ಮಿಕ ಕಾರ್ಯಕ್ರ ಮಗಳು ಮಾತ್ರ ನಡೆಯಲಿದೆ. ಕಳೆದ ಬಾರಿಯಂತೆ ನಗರದ 7-8 ಕಡೆ ಎಲ್ಇಡಿ ದೊಡ್ಡ ಪರದೆ ಅಳವಡಿಸುವ ಮೂಲಕ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ವಿದ್ಯುತ್ ದೀಪಾಲಂಕಾರ, ಹೂವಿನ ಅಲಂಕಾರ, ಉತ್ಸವ ಕುರಿತ ಫ್ಲೆಕ್ಸ್ ಹಾಕಲಾಗುವುದು ಎಂದು ಹೇಳಿದರು.

ಹಾಸನಾಂಬ ಉತ್ಸವಕ್ಕೆ ಚಾಲನೆ ನೀಡಲು ಈ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಆಹ್ವಾನಿಸಲಾಗುವುದು. ಹತ್ತು ದಿನ ಹಾಸನಾಂಬಾ ದೇವಿಯ ಪೂಜೆ ವಿಧಿ ವಿಧಾನಗಳನ್ನು ಆನ್ಲೈನ್ ಮೂಲಕ ಪ್ರಸಾರ ಮಾಡಲು ತಿರ್ಮಾನಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಮಾತನಾಡಿ, ‘ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ನಾಲ್ಕು ದಿನಗಳ ಹಿಂದೆ 0.90 ಇತ್ತು. ಪ್ರಸ್ತುತ 1.27 ಕ್ಕೆ ಏರಿಕೆಯಾಗಿದೆ. ಆದ್ದರಿಂದ ಹಾಸನಾಂಬ ಉತ್ಸವ ಸರಳವಾಗಿ ಆಚರಿಸುವುದು ಉತ್ತಮ’ ಎಂದರು.

ಸಭೆಯಲ್ಲಿ ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ಪ್ರೀತಮ್ ಜೆ ಗೌಡ, ಸಿ.ಎನ್. ಬಾಲಕೃಷ್ಣ ಕೆ.ಎಸ್ ಲಿಂಗೇಶ್, ಅವರು ಅಭಿಪ್ರಾಯಗಳನ್ನು ತಿಳಿಸಿ, ಸಲಹೆಗಳನ್ನು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ನಂದಿನಿ, ಉಪ ವಿಭಾಗಾಧಿಕಾರಿ ಬಿ.ಎ.ಜಗದೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಾ.ಕೆ.ಎಂ. ಸತೀಶ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.